ಉಡುಪಿ ಅನ್ ಲಾಕ್ ಜಾರಿ: ಸಲೂನ್, ಜವಳಿ, ಚಪ್ಪಲಿ, ಇಲೆಕ್ಟ್ರಾನಿಕ್ ಅಂಗಡಿ, ಬ್ಯೂಟಿ ಪಾರ್ಲರ್ ತೆರೆಯಲು ಅವಕಾಶ

ಉಡುಪಿ ಜೂ.21(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದ್ದಂತೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಿ ಅನ್ಲಾಕ್ ಜಾರಿ ಮಾಡಲಾಗಿದೆ. ಈ ಮೂಲಕ ಅನೇಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಅದರಂತೆ ನಾಳೆಯಿಂದ ಜಿಲ್ಲೆಯಲ್ಲಿ ಜವಳಿ ಅಂಗಡಿಗಳು, ಚಪ್ಪಲಿ, ಇಲೆಕ್ಟ್ರಾನಿಕ್ ಅಂಗಡಿಗಳು, ಸೆಲೂನ್, ಬ್ಯೂಟಿ ಪಾರ್ಲರ್ ತೆರೆಯಲು ಸಂಜೆ 5 ವರೆಗೆ ಅವಕಾಶ ನೀಡಲಾಗಿದೆ. 

ಈ ಮೂಲಕ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಈ ಎಲ್ಲಾ ವ್ಯಾಪಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಆರಂಭವಾಗುತ್ತಿದ್ದಂತೆ ಯಾರೂ ಊಹಿಸಿರಲಿಲ್ಲ ಕೋವಿಡ್ ಈ ಮಟ್ಟಿಗೆ ಜನರ ಜೀವನದ ಮೇಲೆ ಪ್ರಭಾವ ಬೀರುತ್ತದೆ ಎಂದು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮತ್ತೆ ಲಾಕ್ ಡೌನ್ ನ ಕರಿಛಾಯೆ ಜಿಲ್ಲೆಯ ಜನರ ಜೀವನ ನಿರ್ವಹಣೆ ಮೇಲೆ ಪರಿಣಾಮ ಬೀರಿತ್ತು. ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಮಾಡಲಾದ ಕೆಲವೇ ಸಮಯದಲ್ಲಿ ಅನೇಕ ಅಂಗಡಿಗಳನ್ನು ತೆರೆಯಲು ಬೇಡಿಕೆ ಕೇಳಿ ಬಂದಿದ್ದವು. ಈ ಪೈಕಿ ಸಲೂಲ್, ಬಟ್ಟೆ, ಚಪ್ಪಲಿ ಅಂಗಡಿಗಳು ಪ್ರಮುಖವಾಗಿದ್ದವು.

ಇದೀಗ ಇವುಗಳನ್ನು ತೆರೆಯಲು ಅವಕಾಶ ನೀಡಿದ್ದು. ಸಂಕಷ್ಟದಲ್ಲಿ ಸಿಲುಕಿದ್ದ ಸೆಲೂನ್, ಬ್ಯೂಟಿ ಪಾರ್ಲರ್, ಬಟ್ಟೆ ಮಳಿಗೆಗಳ ವ್ಯಾಪಾರಿಗಳು ನಿಟ್ಟುಸಿರು ಬಿಡುವಂತಾಗಿದೆ. 

Leave a Reply

Your email address will not be published. Required fields are marked *

error: Content is protected !!