ದ.ಕ: ಜೂ.23ರಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಜೂ. 23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.
ಜವಳಿ, ಝರಾಕ್ಸ್, ಚಪ್ಪಲಿ, ಮೊಬೈಲ್ ಅಂಗಡಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ತಗ್ಗಿಸಲು ಕ್ರಮ ವಹಿಸಬೇಕೆಂದೂ ಮುಖ್ಯಮಂತ್ರಿ ಸೂಚನೆ ನೀಡಿದ್ದು, ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.