ಮಲ್ಪೆ: ಹೋಟೆಲ್ ಉದ್ಯಮಿ ಆತ್ಮಹತ್ಯೆ
ಮಲ್ಪೆ ಜೂ.24(ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯಲ್ಲಿ ನಡೆದಿದೆ.
ಸುರೇಶ ಶೆಟ್ಟಿ(48) ಆತ್ಮಹತ್ಯೆ ಮಾಡಿಕೊಂಡವರು, ಪೂನದಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದ ಇವರು ಅನಾರೋಗ್ಯದ ಕಾರಣ ಊರಿಗೆ ಬಂದಿದ್ದರು. ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಯನ್ನೂ ಪಡೆದುಕೊಂಡಿದ್ದರು.
ಜೂ.23 ರಂದು ಮಧ್ಯಾಹ್ನದ ವೇಳೆಗೆ ಮನೆಯಲ್ಲಿ ಕಾಣಿಸದಿದ್ದಾಗ ಅವರಿಗಾಗಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ಈ ವೇಳೆ ಮನೆಯ ಪಕ್ಕದ ಜಲಜ ಶೆಡ್ತಿರವರ ತೆಂಗಿನ ತೋಟದಲ್ಲಿರುವ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.