ಉಡುಪಿ ಜೂ.24: (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆಯಾದರೂ, ಮುಂದಿನ ದಿನಗಳಲ್ಲಿ ಸೋಂಕು ಹೆಚ್ಚಳವಾಗದಂತೆ ತಡೆಗಟ್ಟುವ ಸಲುವಾಗಿ ವಾರಾಂತ್ಯ ಕರ್ಫ್ಯೂ ಜಾರಿಮಾಡಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಆದೇಶ ಹೊರಡಿಸಿದ್ದು ಅದರಂತೆ ಜಿಲ್ಲೆಯಲ್ಲಿ ಪ್ರತಿ ಶುಕ್ರವಾರ ಸಂಜೆ 7.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿ ವ್ಯಕ್ತಿಗಳ ಚಲನೆಯನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.
ವಾರಾಂತ್ಯ ಕರ್ಫ್ಯೂ ನಲ್ಲಿ ಅನುಮತಿಸಿರುವ ಹಾಗೂ ನಿರ್ಬಂಧಿತ ಸೇವೆಗಳ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದ್ದು, ಆ ಪ್ರಕಾರ ವಾರಾಂತ್ಯ ಕರ್ಫ್ಯೂ ನ ಅವಧಿಯಲ್ಲಿ ಜಿಲ್ಲೆಯಲ್ಲಿ ಆಹಾರ, ದಿನಸಿ, ಹಣ್ಣು ಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 6 ರಿಂದ ಮಧ್ಯಾಹ್ನ, 2 ಗಂಟೆಯವರೆಗೆ ಕಾರ್ಯನಿರ್ವಹಿಸಬಹುದಾಗಿದೆ. ಆದರೆ ಯಾವುದೇ ತಯಾರಿಸಲಾದ ಆಹಾರ, ಪಾನಿಪುರಿ, ಚಾಟ್ ಮುಂತಾದವುಗಳ ಮಾರಾಟಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇದರೊಂದಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS)ಯ ಅಂಗಡಿಗಳಿಗೆ ಬೆಳಿಗೆ 6,00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.
ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ, 6.00 ರಿಂದ ಮಧ್ಯಾಹ್ನ 2 ಗಂಟೆ ರವರೆಗೆ ಪಾರ್ಸೆಲ್ ಕೊಂಡು ಹೋಗಲು ಮಾತ್ರ ಅನುಮತಿಸಲಾಗಿದೆ. ಜನರು ಮನೆಯಿಂದ ಹೊರಕ್ಕೆ, ಸಂಚರಿಸುವುದನ್ನು ಕಡಿಮೆ ಮಾಡಲು COVID 19 ನಿರ್ವಹಣೆಗಾಗಿರುವ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ಧರಾಗಿ 24×7ಹೋಮ್ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿಸಲಾಗಿದೆ. ಹಾಗೂ ರೆಸ್ಟೋರೆಂಟ್ ಗಳಲ್ಲಿ ಮತ್ತು ತಿನಿಸುಕೇಂದ್ರಗಳಲ್ಲಿ, ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿಗಳನ್ನು ಮಾತ್ರ ಅನುಮತಿಸಲಾಗಿದೆ. ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ, ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ, ರೈಲ್ವೆ, ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಲಾಗಿದೆ. ಆದರೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
“ಈಗಾಗಲೇ ನಿಗದಿಯಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಷರತ್ತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ ವಿವಾಹಗಳನ್ನು ಆಯೋಜಿಸುವವರು ವಿವಾಹ ಆಮಂತ್ರಣ ಪತ್ರ ಅಥವಾ ಇತರಯಾವುದೇ ಸಂಬಂಧಿತ ದಾಖಲೆ ಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು. ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಮದುವೆ ಕಾರ್ಯಕ್ರಮಕ್ಕೆ 40 ಪಾಸ್‌ಗಳನ್ನು ನೀಡಬೇಕು. ವಾಸ್ ಹೊಂದಿರುವವರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ನ್ನು ಇತರರಿಗೆ ವರ್ಗಾಯಿಸಲು ಅವಕಾಶ ವಿರುವುದಿಲ್ಲ. ಮದುವೆ ಕಾರ್ಯಕ್ರಮ, ಹಾಜರಾಗುವ ಜನರು ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶವಸಂಸ್ಕಾರ, ಅಂತ್ಯಕ್ರಿಯೆಗಳಲ್ಲಿ ಗರಿಷ್ಠ 5 ಪಾಲ್ಗೊಳ್ಳಬಹುದಾಗಿದೆ.
ಉಳಿದಂತೆ, ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು, ಅಗತ್ಯ ಸೇವೆಗಳು ಮತ್ತು COVID-19 ಕಂಟೈನ್ಮೆಂಟ್ ಮತ್ತು ಮ್ಯಾನೇಜೆನ್ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತವೆ, ಮತ್ತು ಇಂತಹ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು / ಸಿಬ್ಬಂದಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ. ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24/7 ಕಾರ್ಯಾಚರಣೆಗಳ ಅಗತ್ಯವಿರುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳು / ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು, ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸ ಬಹುದಾ ಗಿರುತ್ತದೆ. ಆದಾಗ್ಯೂ, ಸಾಧ್ಯವಾದಷ್ಟು ಮಟ್ಟಿಗೆ, ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು.
ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳನ್ನುಸಂಬಂಧಿಸಿದ ಸಂಸ್ಥೆ ಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯೊಂದಿಗೆ ಸಂಚಾರಿಸಬಹುದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಅವಶ್ಯಕ ಸಿಬ್ಬಂದಿಹಾಗೂ ಕಾರ್ಮಿಕರನ್ನು ಮಾತ್ರ ಬಳಸಿ ಕೊಂಡು ಕಾರ್ಯನಿರ್ವಹಿಸುವುದು ಅವರನ್ನು ಹೊರತುಪಡಿಸಿ ಇತರ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ.ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹರು ಕನಿಷ್ಠ ದಾಖಲೆಗಳೊಂದಿಗೆ ಸಂಚರಿಸಲು ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ. | | |