ಹುಟ್ಟುಹಬ್ಬದ ದಿನವೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮೆಡಿಕಲ್ ರೆಪ್
ಮೈಸೂರು ಜೂ.25: ತನ್ನ ಹುಟ್ಟುಹಬ್ಬದ ದಿನವೇ ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ.
ಎನ್.ಆರ್.ಮೊಹಲ್ಲಾ ನಿವಾಸಿ ಎಸ್.ಕಾರ್ತಿಕ್ (30) ಆತ್ಮಹತ್ಯೆ ಮಾಡಿಕೊಂಡವರು.ಇವರು, ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದು, ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್ ನಲ್ಲಿ ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಬರೆದಿದ್ದರು. ಈ ಬಗ್ಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲಗಳ ಪ್ರಕಾರ ಕಾರ್ತಿಕ್ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆ ಯತ್ನಿಸಿದ್ದರು. ತಂದೆ-ತಾಯಿ ಕಳೆದುಕೊಂಡು ಆಘಾತಕ್ಕೆ ಒಳಗಾಗಿದ್ದ ಕಾರ್ತಿಕ್ ತಾಯಿ ಸಾವನ್ನಪ್ಪಿದ ದಿನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ತಂದೆ ಸಾವನ್ನಪ್ಪಿದ ದಿನ ರೈಲಿನಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಯತ್ನಿದಿದ್ದ ಎಂದು ತಿಳಿದು ಬಂದಿದೆ.