ಕೊಡವೂರು ಕಲ್ಮತ್ ಮಸೀದಿ ಜಾಗ ಮರಳಿ ಸರ್ಕಾರದ ವಶಕ್ಕೆ

ಉಡುಪಿ: ಕೊಡವೂರು ಗ್ರಾಮದ ಸರ್ವೆ ನಂ 53/6 ರಲ್ಲಿ 0.67 ಸೆಂಟ್ಸ್ ಜಾಗವನ್ನು ವಕ್ಫ್ ಬೋರ್ಡ್ ಮುಖೇನ ಕಲ್ಮತ್ ಮಸೀದಿ, ಪಳ್ಳಿ ಜಿಡ್ಡ, ಕೊಡವೂರು ಇವರ ಹೆಸರಿಗೆ ಮಂಜೂರು ಮಾಡಲಾಗಿತ್ತು. ಈ ಬಗ್ಗೆ ಸ್ಥಳೀಯವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಕಂದಾಯ ಸಚಿವರಾದ ಆರ್ ಅಶೋಕ್ ಅವರನ್ನು ಭೇಟಿಯಾಗಿ ಸ್ಥಳೀಯ ಸ್ಥಿತಿಗತಿಯನ್ನು ಮನವರಿಕೆ ಮಾಡಿ ಈ ಜಾಗವನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಲಾಗಿದ್ದು, ಅದನ್ನು ಮರಳಿ ಸರಕಾರದ ವಶಕ್ಕೆ ಪಡೆಯುವಂತೆ ಮನವಿ ಮಾಡಿದ್ದರು.

ಅದರಂತೆ ಕಂದಾಯ ಸಚಿವರ ಸೂಚನೆ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯವರು ಸ್ಥಳೀಯ ಸ್ಥಿತಿಗತಿಗಳ ವರದಿಯನ್ನು ಸಲ್ಲಿಸಿರು ವಂತೆ ಈ ಜಾಗವನ್ನು ಮರಳಿ ಸರಕಾರದ ವಶಕ್ಕೆ ಪಡೆದು ಜೂ. 22ಕ್ಕೆ ಸರ್ಕಾರದ ಹೆಸರಿಗೆ ಅಧಿಸೂಚನೆ ಹೊರಡಿಸಲಾಗಿದೆ. 2018 ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂದಿನ ಜಿಲ್ಲಾಧಿಕಾರಿಯವರು ಈ ಜಾಗವನ್ನು ವಕ್ಫ್ ಬೋರ್ಡ್ ಮುಖೇನ ಕಲ್ಮತ್ ಮಸೀದಿ ಇವರ ಹೆಸರಿಗೆ ಮಂಜೂರು ಮಾಡಲು ಶಿಫಾರಸ್ಸು ಮಾಡಿರುತ್ತಾರೆ.

ಈ ಜಾಗವನ್ನು ಮರಳಿ ಸರಕಾರದ ವಶಕ್ಕೆ ಪಡೆಯುವಂತೆ ನಾವು ಸಲ್ಲಿಸಿದ ಮನವಿಗೆ ತಕ್ಷಣ ಸ್ಪಂದಿಸಿ ಸಾರ್ವಜನಿಕ ಹಿತದೃಷ್ಟಿ ಯಿಂದ ಜಾಗವನ್ನು ಮರಳಿ ಸರಕಾರದ ವಶಕ್ಕೆ ಪಡೆಯುವಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಕಂದಾಯ ಸಚಿವರಾದ ಆರ್. ಅಶೋಕ್ ಅವರಿಗೆ ಉಡುಪಿ ಜನತೆಯ ಪರವಾಗಿ ಶಾಸಕ ರಘುಪತಿ ಭಟ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!