3ನೇ ಅಲೆ ಮುನ್ನೆಚ್ಚರಿಕಾ ಕ್ರಮವಾಗಿ 40 ಸಾವಿರ ಮಕ್ಕಳ ತಪಾಸಣೆ-ಸುನಿಲ್ ಕುಮಾರ್
ಕಾರ್ಕಳ ಜೂ.25: ಕೋವಿಡ್ ಮೂರನೇ ಅಲೆಯಿಂದ ಮಕ್ಕಳಿಗೆ ಹೆಚ್ಚಿನ ಅಪಾಯ ಇದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿ ಸಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಕಳ, ಹೆಬ್ರಿ ತಾಲೂಕಿನ 40 ಸಾವಿರ ಮಕ್ಕಳನ್ನು ತಪಾಸಣೆಗೊಳಪಡಿ ಸಲಾಗುವುದು ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ತಾಲೂಕಿನ 15 ವರ್ಷದೊಳಗಿನ ಮಕ್ಕಳಿಗೆ ವಾತ್ಸಲ್ಯ ಹೆಸರಿನಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುವುದು. ಆರೋಗ್ಯ ಇಲಾಖೆ, ಉಭಯ ಜಿಲ್ಲೆಗಳ ವೈದ್ಯಕೀಯ ಕಾಲೇಜುಗಳ ಸಹಕಾರದೊಂದಿಗೆ ಪ್ರತಿ ಶಾಲೆಗಳಲ್ಲಿ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಪ್ರತಿದಿನ10 ಕೇಂದ್ರಗಳಲ್ಲಿ ತಪಾಸಣೆ ನಡೆಯಲಿದ್ದು, ಉಭಯ ತಾಲೂಕಿನ ಸುಮಾರು 40 ಸಾವಿರ ಮಕ್ಕಳನ್ನು ತಪಾಸಣೆಗೊಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಹೆಬ್ರಿ ಹಾಗೂ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣವಾಗುತ್ತಿರುವ ಆಕ್ಸಿಜನ್ ಘಟಕವು ಜುಲೈ ತಿಂಗಳಲ್ಲಿ ಲೋಕಾರ್ಪಣೆಗೊಂಡು ಸಾರ್ವಜನಿಕರ ಪ್ರಯೋಜನಕ್ಕೆ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ, ಜಿಪಂ.ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು, ಉದಯ ಎಸ್. ಕೋಟ್ಯಾನ್ ಉಪಸ್ಥಿತರಿದ್ದರು.