ಉಡುಪಿ: ಎರಡಂಕಿಗೆ ಇಳಿದ ಕೋವಿಡ್ ಪಾಸಿಟಿವ್ ಪ್ರಕರಣ – ಇಬ್ಬರ ಮೃತ್ಯು

ಉಡುಪಿ ಜೂ.25(ಉಡುಪಿ ಟೈಮ್ಸ್ ವರದಿ): ಕೆಳ ‌ದಿನಗಳ‌ ಬಳಿಕ ಜಿಲ್ಲೆಯಲ್ಲಿ ಪತ್ತೆಯಾಗುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆ ಎರಡಂಕಿಗೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 92 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಡುಪಿಯಲ್ಲಿ 49, ಕುಂದಾಪುರ 24, ಕಾರ್ಕಳ 18 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ‌ ಸಂಖ್ಯೆ 1260 ಕ್ಕೆ ಇಳಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಉಡುಪಿಯ ಓರ್ವ ವ್ಯಕ್ತಿ ಹಾಗೂ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. 

ಜೂ. 24 ರಂದು ಜಿಲ್ಲೆಯಲ್ಲಿ 160 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ  40,833 ಮಂದಿ ಗುಣಮುಖರಾಗಿದ್ದಾರೆ. ಹಾಗೂ  ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 65,901 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 64,254 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2ನೇ ಅಲೆಯಲ್ಲಿ ಜೂ.24 ರ ವೇಳೆಗೆ ಜಿಲ್ಲೆಯಲ್ಲಿ 3,02801 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 42,290 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 197 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 5 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರ 6 ಹಾಗೂ ಹೊರ ಜಿಲ್ಲೆಯ 19 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ  ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 22 ಮಂದಿ ಸೋಂಕಿನಿಂದ  ಗುಣಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 29 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!