ದ.ಕ ವೀಕೆಂಡ್ ಕರ್ಫ್ಯೂ: ಅನಾವಶ್ಯಕ ಹೊರ ಬಂದರೆ ನಿರ್ದಾಕ್ಷಿಣ್ಯ ಕ್ರಮ, ವಾಹನ ಸೀಝ್
ದ.ಕ: ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸುವ ಹಿನ್ನೆಲೆಯ ಶನಿವಾರ ಹಾಗೂ ರವಿವಾರದಂದು ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಆರೋಗ್ಯ ಸೇವೆ ಹೊರತು ಪಡಿಸಿ ಬಹುತೇಕ ಎಲ್ಲಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರ ವಾಹನಗಳು ಸಂಚಾರ ನಡೆಸುವಂತಿಲ್ಲ. ಖಾಸಗಿ ವಾಹನಗಳು ರಸ್ತೆಗಿಳಿದ್ದಲ್ಲಿ ಮುಲಾಜಿಲ್ಲದೆ ಮುಟ್ಟುಗೋಲು ಹಾಕಲು ಕಾನೂನು ಹಾಗೂ ಸುವ್ಯವಸ್ಥೆಯ ಡಿಸಿಪಿ ಹರಿರಾಂ ಶಂಕರ್ ಆದೇಶ ನೀಡಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿರುವ ಡಿಸಿಪಿ ಹರಿರಾಂ, ಈಗಾಗಲೇ ಜಿಲ್ಲಾಡಳಿತ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ಕಾರ್ಯಾಚರಣೆ ನಡೆಸಲಿದೆ. ತುರ್ತು ಸಂದರ್ಭ ಆರೋಗ್ಯ ಸೇವೆ ಹೊರತುಪಡಿಸಿ ಇತರೆ ಯಾವುದೇ ವಾಹನಗಳು ರಸ್ತೆಗಿಳಿದ್ದಲ್ಲಿ ಅವುಗಳನ್ನು ಸೀಝ್ ಮಾಡಲು ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನಲೆವಾಹನ ರಸ್ತೆಗಳಿದರೆ ಸೀಝ್ ಮಾಡಲು ಆದೇಶವಾಹನ ಸೀಝ್ ಮಾಡಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ, ಮೆಡಿಕಲ್ ತುರ್ತು ಅವಶ್ಯಕತೆ, ಸರ್ಕಾರಿ ಅಧಿಕಾರಿಗಳು, ಹಾಲಿನ ಬೂತ್ ಗಳಿಗೆ ಅವಕಾಶವಿದ್ದು, ಆನ್ ಲೈನ್ ಫುಡ್ ಡೆಲಿವರಿಗೆ ಮಾತ್ರ ಅವಕಾಶ. ಹೋಟೆಲ್‌ಗೆ ಹೋಗಿ ಪಾರ್ಸೆಲ್ ತರುವಂತಿಲ್ಲ, ಸ್ಥಳದಲ್ಲಿದ್ದವರು ಮಾತ್ರ ಕಟ್ಟಡ ಕಾಮಗಾರಿ ನಡೆಸಲು ಅವಕಾಶ, ಕಟ್ಟಡ ಕಾಮಗಾರಿ ಸ್ಥಳಕ್ಕೆ ತೆರಳಲು ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.