ಉಡುಪಿ: ಜೂ.26 ರಂದು ಲಭ್ಯವಿರುವ ಕೋವಿಡ್ ಲಸಿಕೆ ಬಗ್ಗೆ ಮಾಹಿತಿ

ಉಡುಪಿ ಜೂ.25(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ನಾಳೆ (ಜೂ.26) ಲಭ್ಯವಿರುವ ಕೋವಿಡ್ ಲಸಿಕೆ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ‌ ಡಾ. ನಾಗಭೂಷಣ ಉಡುಪ ಅವರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಉಡುಪಿ ನಗರ ಪ್ರದೇಶದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ 150 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು ಜು.5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ‌  ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ ನಾಳೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಬೆಳಿಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!