ಉಡುಪಿ: ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಚಾಲನೆ

ಉಡುಪಿ ಜೂ.26(ಉಡುಪಿ ಟೈಮ್ಸ್ ವರದಿ): ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ 2000 ಎಕರೆ ಪ್ರದೇಶದಲ್ಲಿ ನಡೆಯುತ್ತಿರುವ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಇಂದು ಕಡೆಕಾರ್ ಗ್ರಾಮದಲ್ಲಿ ಚಾಲನೆ ನೀಡಲಾಯಿತು. 

ಈ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಎಂಟು ಸಾವಿರ ಎಕರೆ ಹಡಿಲು ಭೂಮಿ ಇದೆ. ಈ ಪ್ರದೇಶದಲ್ಲಿ ಕೃಷಿ ಮಾಡಿದರೆ ಸುಮಾರು 15 ಸಾವಿರ ಕ್ವಿಂಟಲ್ ಅಕ್ಕಿ ಉತ್ಪಾದಿಸಬಹುದು ಎಂದರು.

ಇದೇ ವೇಳೆ ‌ರಾಜ್ಯದಲ್ಲಿ ಸುಮಾರು 15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಡಿಲು ಭೂಮಿ ಇದೆ ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ಆಹಾರೋತ್ಪಾದನೆ ಕುಂಠಿತವಾಗಲಿದೆ. ಸರಕಾರಕ್ಕೆ ಆದಾಯವು ಕಡಿಮೆಯಾಗಲಿದೆ ದೇಶದಲ್ಲಿ ಶೇ. 60 ರಷ್ಟು ಉದ್ಯೋಗ ಕೃಷಿ ಕೃಷಿಯಿಂದ ಲಭಿಸುತ್ತಿದ್ದು ಶೇಕಡ 20ರಷ್ಟು ಜಿಎಸ್ಟಿ ಆದಾಯ ಸರ್ಕಾರಕ್ಕೆ ಬರುತ್ತದೆ.

ಕಳೆದ ವರ್ಷ ರಾಜ್ಯದಲ್ಲಿ 153 ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮಾಡಲಾಗಿದ್ದು, ಶೇಕಡ ಹತ್ತರಷ್ಟು ಉತ್ಪಾದನೆ ಹೆಚ್ಚಳವಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಆರೆಸ್ಸೆಸ್ ಹಿರಿಯ ಪ್ರಚಾರಕ ದಾ. ಮಾ. ರವೀಂದ್ರ, ಉದ್ಯಮಿ ಭುವನೆಂದ್ರ ಕಿದಿಯೂರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಮುರಳಿ ಕಡೆಕಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಮೋಹನ್ ರಾಜ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!