ಕಾಂಗ್ರೆಸ್’ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಕುರಿತು ಜಾಲತಾಣದಲ್ಲಿ ಅವಹೇಳನ- ದೂರು ದಾಖಲು
ಮಂಗಳೂರು ಜೂ.27: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಅವರ ಕುರಿತು
ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ವ್ಯಕ್ತಿಯೊಬ್ಬನ ವಿರುದ್ದ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿರುವೆರ್ ಕುಡ್ಲ ಸಂಘಟನೆಯು ಆರೋಪಿಯ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ರಶೀದ್ ಟಿಪ್ಪು ಎಂಬ ಹೆಸರಿ ಫೇಸ್ ಬುಕ್ ಖಾತೆಯಲ್ಲಿ ಜನಾರ್ಧನ ಪೂಜಾರಿ ವಿರುದ್ದ ಅವಹೇಳನಕಾರಿಯಾಗಿ ಬರಹ ಬರೆದು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ನಲ್ಲಿ ಜನಾರ್ದನ ಪೂಜಾರಿಯವರು, ಸ್ವಂತ ಪಕ್ಷದಲ್ಲಿ ನಿರಂತರ ಅಧಿಕಾರ ಅನುಭವಿಸಿ ಬಿಜೆಪಿ ಪರ ಬ್ಯಾಟಿಂಗ್ ಮಾಡುವ ವಿಚಿತ್ರ ವ್ಯಕ್ತಿ. ಈವರೆಗೆ ಈತನನ್ನು ಹೈಕಮಾಂಡ್ ಕೂಡ ವಿರೋಧಿಸಿಲ್ಲ. ಈ ತರಹ ಯಾರಾದರೂ ಅಲ್ಪಸಂಖ್ಯಾತ ವ್ಯಕ್ತಿ ಮಾತನಾಡಿದ್ದಲ್ಲಿ ಕ್ಷಣ ಮಾತ್ರದಲ್ಲಿ ಕಾಂಗ್ರೆಸ್ ವಜಾಗೊಳಿಸುತ್ತಿತ್ತು. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬ ಸಿದ್ಧಾಂತ ನಿಲ್ಲಿಸಿ ಎಂದು ಬರೆಯಲಾಗಿದೆ. ಅಲ್ಲದೆ ಜನಾರ್ದನ ಪೂಜಾರಿಯವರ ಫೋಟೋ ಅಪ್ಲೋಡ್ ಮಾಡಿ ಅದರ ಮೇಲೆ “ಎಣ್ಣೆಯಲ್ಲಿ ಕರಿದ ಗೋಲಿ ಬಜೆ, ಬೆಂಕಿಯಲ್ಲಿ ಕರಿದ ಗೋಲಿ ಬಜೆ” ಎಂದು ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ.