ಉಡುಪಿ: ಜೂ.28 ರಂದು ಲಭ್ಯವಿರುವ ಕೋವಿಡ್ ಲಸಿಕೆ ಕುರಿತು ಮಾಹಿತಿ
ಉಡುಪಿ ಜೂ.27(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ನಾಳೆ ಅಂದರೆ ಜೂ.28 ರಂದು ಲಭ್ಯವಿರುವ ಕೋವಿಡ್ ಲಸಿಕೆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಅವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು ಜಿಲ್ಲೆಯಲ್ಲಿ ನಾಳೆ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.
ನಾಳೆ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತುಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ45ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದೆ.
ಅದರಂತೆ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೈಂಟ್ ಸಿಸಿಲಿ ಶಾಲೆ)ಯಲ್ಲಿ 150 ಕೋವಿಶೀಲ್ಡ್ ಪ್ರಥಮ ಡೋಸ್ ಹಾಗೂ 50 ಕೋವಿಶೀಲ್ಡ್ 2ನೇ ಡೋಸ್ ಲಭ್ಯವಿದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ,ಮಣಿಪಾಲ)ದಲ್ಲಿ 50 ಕೋವಿಶೀಲ್ಡ್ ಪ್ರಥಮ ಡೋಸ್ ಹಾಗೂ 150 ಕೋವಿಶೀಲ್ಡ್ 2ನೇ ಡೋಸ್ ಲಭ್ಯವಿದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆಕಟ್ಟಡ (ಅಲಂಕಾರ ಥಿಯೇಟರ್ ಹತ್ತಿರ)ದಲ್ಲಿ 50 ಕೋವಿಶೀಲ್ಡ್ ಪಥಮ ಡೋಸ್ ಹಾಗೂ 130 ಕೋವಿಶೀಲ್ಡ್ 2ನೇ ಡೋಸ್ ಲಭ್ಯವಿದೆ.
ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 20 ಕೋವಿಶೀಲ್ಡ್ ಪಥಮ ಡೋಸ್ 30 ಕೋವಿಶೀಲ್ 2ನೇ ಡೋಸ್ ಲಭ್ಯವಿದೆ. ಇನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ 100 ಡೋಸ್ ಕೋವಿಶೀಲ್ಡ್ ಲಭ್ಯವಿದ್ದು, ಜು 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ’ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಅದ್ಯತಾಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತ ಪಡಿಸಿಕೊಂಡು ನಾಳೆ ಅಂದರೆ ಜೂ 28 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ತಿಳಿಸಿದ್ದಾರೆ.