ಎಸ್​ಎಸ್​​ಎಲ್​ಸಿ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು (ಉಡುಪಿ ಟೈಮ್ಸ್ ವರದಿ): ಕೊರೊನಾದಿಂದಾಗಿ ಈ ಬಾರಿ ವಿಶೇಷವಾಗಿ ಪರೀಕ್ಷೆ ನಡೆಸಲಾಗುತ್ತಿದ್ದು, ಜು.19 ಹಾಗೂ ಜು. 22ರಂದು ಎರಡು ದಿನ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಂದು ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜು.19ರಂದು ಕೋರ್ ವಿಷಯಗಳ ಪರೀಕ್ಷೆ (ಸಮಾಜ ವಿಜ್ಞಾನ, ಗಣಿತ, ವಿಜ್ಞಾನ) ಜು. 22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದ್ದು, ಮಲ್ಟಿಪಲ್ ಚಾಯ್ಸ್ ಮಾದರಿ ಪರೀಕ್ಷೆ ನಡೆಯಲಿದೆ.

ವಿದ್ಯಾರ್ಥಿಗಳು ಒಎಂಆರ್ ಶೀಟ್ ನಲ್ಲಿ ಉತ್ತರಿಸಬೇಕು ಎಂದಿದ್ದಾರೆ. ಇನ್ನು ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ1.30 ರವರೆಗೆ ನಡೆಯಲಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಕೊರೊನಾ ಲಕ್ಷಣಗಳಿದ್ದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಒಂದು ವೇಳೆ ಕೊರೊನಾ ಸೋಂಕಿತ ವಿದ್ಯಾರ್ಥಿ ಪರೀಕ್ಷೆ ಬರೆಯಲೇಬೇಕು ಎಂದು ಆಶಿಸಿದರೆ ಅವರಿಗೆ ಹತ್ತಿರದ ಕೊರೊನಾ ಕೇರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗಿವುದು ಎಂದು ಮಾಹಿತಿ ನೀಡಿದ್ದಾರೆ. . 8.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಭಾಗಿಯಾಗುತ್ತಿದ್ದಾರೆ, 73 ಸಾವಿರದ 660 ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಕಳೆದ ಬಾರಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ಬರೆದು ಹಿರಿಯರಿಗೆ ಮಾದರಿ ಯಾಗಿದ್ದಾರೆ ಎಂದು ಸಚಿವರು ಕಳೆದ ಬಾರಿಯ ವಿದ್ಯಾರ್ಥಿಗಳನ್ನು ಹೊಗಳಿದರು.

ದ್ವಿತೀಯ ಪಿ ಯು ಸಿ ಫಲಿತಾಂಶ ಜುಲೈ 2 ನೇ ವಾರದಲ್ಲಿ ಪ್ರಕಟ: ಯಾರಿಗೂ ಅನ್ಯಾಯ ಆಗದ ರೀತಿಯಲ್ಲಿ ದ್ವಿತೀಯ ಪಿ ಯು ಸಿ ಫಲಿತಾಂಶ ಜೂಲೈ 2 ನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಇದಕ್ಕಾಗಿ ಸಮಿತಿ ರಚನೆಯಾಗಿದ್ದು ವಿದ್ಯಾರ್ಥಿಗಳಿಗೆ ತಮ್ಮ ಅಂಕದ ಬಗ್ಗೆ ಸಂಶಯವಿದ್ದಲ್ಲಿ ಮರು ಪರೀಕ್ಷೆ ಬರೆಯುವ ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!