72 ಮಂದಿಯಲ್ಲಿ ಪಾಸಿಟಿವ್, ಉಡುಪಿಯ ಮೂವರ ಸಾವು- ಸಕ್ರಿಯ ಪ್ರಕರಣ 895ಕ್ಕೆ ಇಳಿಕೆ
ಉಡುಪಿ ಜೂ.28(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖ ವಾಗುತ್ತಿದ್ದೆ. ಈ ಮೂಲಕ ಒಂದು ಸಾವಿರಕ್ಕೂ ಅಧಿಕ ಇದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ 895ಕ್ಕೆ ಇಳಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 72 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 32, ಕುಂದಾಪುರ 32, ಕಾರ್ಕಳ 5 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 895 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಉಡುಪಿಯ ಓರ್ವ ಮಹಿಳೆ ಹಾಗೂ ಇಬ್ಬರು ವ್ಯಕ್ತಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ. 27 ರಂದು ಜಿಲ್ಲೆಯಲ್ಲಿ 184 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 41,499 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 66,208 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 64,920 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೋವಿಡ್ 2 ನೇ ಅಲೆಯಲ್ಲಿ ಜೂ.27 ರ ವೇಳೆಗೆ ಜಿಲ್ಲೆಯಲ್ಲಿ 3,10,210 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 42,597 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2 ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 203 ಮಂದಿ ಸೋಂಕಿಗೆ ಬಲಿಯಾಗಿ ದ್ದಾರೆ. ಇನ್ನು ಜಿಲ್ಲೆಯಲ್ಲಿ 4 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರ 6 ಹಾಗೂ ಹೊರಜಿಲ್ಲೆಯ 20 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 24 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 30 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.