ಅಜೆಕಾರು: ವಿಷ ಪದಾರ್ಥ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಅಜೆಕಾರು ಜು.2(ಉಡುಪಿ ಟೈಮ್ಸ್ ವರದಿ): ವಿಷ ಪದಾರ್ಥ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಕುರೆದ್ದು ಎಂಬಲ್ಲಿ ನಡೆದಿದೆ. 

ಉದಯ ಸೇರ್ವೆಗಾರ್ (39) ಆತ್ಮಹತ್ಯೆ ಮಾಡಿಕೊಂಡವರು.ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು,ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು. ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಇವರು, ಅದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜು.1 ರಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ಹುಲ್ಲು ಸಾಯಲು ಬಿಡುವ ಔಷಧಿಯನ್ನು ಸೇವಿಸಿ ನರಳಾಡುತ್ತಿದ್ದರು. ತಕ್ಷಣ ಇವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ವೇಳೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!