ಉಡುಪಿ: 101 ಮಂದಿಯಲ್ಲಿ ಪಾಸಿಟಿವ್ – ಜಿಲ್ಲೆಯಲ್ಲಿ 925 ಸಕ್ರಿಯ ಪ್ರಕರಣ

ಉಡುಪಿ ಜು.3(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚುತ್ತಿರುವ ಲಕ್ಷಣಗಳು ಕಾಣುತ್ತಿದೆ. ಆದ್ದರಿಂದ ಕೋವಿಡ್ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೋವಿಡ್ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ. ಜಿಲ್ಲೆಯಲ್ಲಿ ಇಂದು 101 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಪೈಕಿ ಉಡುಪಿಯಲ್ಲಿ 36, ಕುಂದಾಪುರ 44, ಕಾರ್ಕಳ 18 ಹಾಗೂ ಹೊರ ಜಿಲ್ಲೆಯ ಮೂವರಲ್ಲಿ  ಸೋಂಕು ಇರುವುದು ಪತ್ತೆ ಯಾಗಿದೆ. ಸದ್ಯ ಜಿಲ್ಲೆಯಲ್ಲಿ 925 ಕೋವಿಡ್ ಸಕ್ರಿಯ ಪ್ರಕರಣಗಳಿವೆ.  

ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ ಕೋವಿಡ್ ನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಜು. 2 ರಂದು ಜಿಲ್ಲೆಯಲ್ಲಿ 97 ಮಂದಿ  ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2 ನೇ ಅಲೆ ಆರಂಭ ಆದಾಗಿನಿಂದ ಈವರೆಗೆ  42,036 ಮಂದಿ ಗುಣಮುಖರಾಗಿದ್ದಾರೆ. ಹಾಗೂ  ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 66,777 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 65,457 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2 ನೇ ಅಲೆಯಲ್ಲಿ ಜು.2 ರ ವೇಳೆಗೆ ಜಿಲ್ಲೆಯಲ್ಲಿ 3,22,227 ಮಂದಿಯನ್ನು ಕೋವಿಡ್  ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 43,166ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2 ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 205 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 8 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರ 6 ಹಾಗೂ ಹೊರ ಜಿಲ್ಲೆಯ 25 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ  ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ  25 ಮಂದಿ ಸೋಂಕಿನಿಂದ  ಗುಣ ಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 35 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!