ನಮಾಝ್ ಸಂದರ್ಭ ಕೋವಿಡ್ ಗೈಡ್ ಲೈನ್ಸ್ ಪಾಲಿಸಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ

ಉಡುಪಿ: ರಾಜ್ಯ ಸರಕಾರವು ಜುಲೈ 5 ರಿಂದ ಧಾರ್ಮಿಕ ಕೇಂದ್ರಗಳಲ್ಲಿ ಆರಾಧನಾ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ. ಆದರೂ ಕೊರೊನ ಮಹಾಮಾರಿಯಿಂದ ನಾವು ಸಂಪೂರ್ಣವಾಗಿ ಮುಕ್ತರಾಗಿಲ್ಲ. ಕೋವಿಡ್ 19 ರ 3ನೇ ಅಲೆ ಯ ಎಚ್ಚರಿಕೆಯ ಘಂಟೆ ಈಗಾಗಲೇ ನಮ್ಮನ್ನು ಕಾಡುತ್ತಿದೆ. 

ಸರಕಾರವು ಮಸೀದಿಗಳಲ್ಲಿ ನಮಾಝ್ ಆರಂಭಿಸಲು ಅನುಮತಿಸಿದೆಯಾದರೂ, ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಎಂಬ ಶರ್ತವನ್ನೂ ವಿಧಿಸಿದೆ. ಆದುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಸೀದಿಗಳಲ್ಲಿ ದೈಹಿಕ ಅಂತರವನ್ನು ಕಾಯ್ದು ಕೊಂಡು ಮತ್ತು ಮಾಸ್ಕ್ ಧಾರಣೆ ಯನ್ನು ಕಡ್ಡಾಯವಾಗಿ ಪಾಲಿಸುವುದ ರೊಂದಿಗೆ ಮಸೀದಿಗಳನ್ನು ತೆರೆಯುವ ಮೂಲಕ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ,ಆರೋಗ್ಯ ಇಲಾಖೆ ಹಾಗೂ ಸರಕಾರದೊಂದಿಗೆ ಸಹಕರಿಸಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕರೆ ನೀಡುತ್ತದೆಂದು ಅಧ್ಯಕ್ಷರಾದ ಇಬ್ರಾಹಿಂ ಸಾಹೇಬ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!