ಉಡುಪಿ: ಕೋವಿಡ್ ಸೋಂಕು ಗಣನೀಯ ಇಳಿಕೆ – ಜಿಲ್ಲೆಯಲ್ಲಿ 821 ಸಕ್ರಿಯ ಪ್ರಕರಣ

ಉಡುಪಿ ಜು.4(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಇಳಿಕೆಯಾಗಿದೆ. ಕೋವಿಡ್ ಸಂಪೂರ್ಣ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ.

ಜಿಲ್ಲೆಯಲ್ಲಿ ಇಂದು 28 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 10, ಕುಂದಾಪುರ 10, ಕಾರ್ಕಳ 8 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 821 ಕೋವಿಡ್ ಸಕ್ರಿಯ ಪ್ರಕರಣಗಳಿವೆ.  

ಇಂದು ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜು.3 ರಂದು ಜಿಲ್ಲೆಯಲ್ಲಿ 130 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖ ರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 42,166 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 69,3237 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 65,587 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 207 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
 

Leave a Reply

Your email address will not be published. Required fields are marked *

error: Content is protected !!