ಉಡುಪಿ: ನೈಟ್ ಕರ್ಫ್ಯೂ ಮಾರ್ಗ ಸೂಚಿ ಪ್ರಕಟ- ಕಟ್ಟು ನಿಟ್ಟಾಗಿ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ

ಉಡುಪಿ ಜು.5(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಾದ್ಯಂತ ಕೋವಿಡ್ ನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿಸಿದ್ದಾರೆ.

ಈ ಪರಿಷ್ಕೃತ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಜು.5 ರ ಬೆಳಿಗ್ಗೆ 6 ಗಂಟೆಯಿಂದ ಜು.19 ರ ಬೆಳಿಗ್ಗೆ6 ಗಂಟೆ ವರೆಗೆ ಕಟ್ಟು ನಿಟ್ಟಿನ ಕ್ರಮ ಜಾರಿ ಮಾಡಲಾಗಿದೆ. ಅದರಂತೆ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಚಿತ್ರಮಂದಿರಗಳು, ಸಿನಿಮಾ ಹಾಲ್ ಗಳು ಮತ್ತು ಪಬ್ ಗಳಿಗೆ ಅನುಮತಿ ಇರುವುದಿಲ್ಲ

ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜುಕೊಳಗಳನ್ನು ತೆರೆಯಲು ಅನುಮತಿಸಿದೆ. ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಲಾಗಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ. ಹಾಗೂ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಅಕಾಡೆಮಿಕ್, ಸಾಂಸ್ಕೃತಿಕ, ಧಾರ್ಮಿಕ ಸಭೆ ಸಮಾರಂಭಗಳು ಮತ್ತುಇತರ ಜನ ಸೇರುವ ಕಾರ್ಯಕ್ರಮಗಳಿಗೆ ಅನುಮತಿ ಇರುವುದಿಲ್ಲ.

ಕೋವಿಡ್ ನಿಯಮಗಳನ್ನು ಪಾಲಿಸಿ ಕೊಂಡು ಮದುವೆ ಹಾಗೂ ಕೌಟುಂಬಿಕ ಶುಭ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ ನಿಗದಿಪಡಿಸಿದ ಷರತ್ತಿಗೊಳಪಟ್ಟು 100 ಜನರಿಗೆ ಮೀರದಂತೆ ನಡೆಸಲು ಅನುಮತಿ ಸಲಾಗಿದೆ. ಅದರಂತೆ ಮದುವೆ/ ಕೌಟುಂಬಿಕ ಶುಭ ಸಮಾರಂಭಗಳನ್ನು ಆಯೋಜಿಸುವವರು ಅಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.  ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ರಮಕ್ಕೆ 100 ಪಾಸ್ ಗಳನ್ನು ನೀಡಬೇಕು, ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ. ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಲಾಗಿದೆ. ಹಾಗೂ ಕೋವಿಡ್ ನಿಯಮಗಳೊಂದಿಗೆ  ಅಂತ್ಯಸಂಸ್ಕಾರದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು  ಅನುಮತಿಸಲಾಗಿದೆ.

ಕೋವಿಡ್ ನಿಯಮಗಳೊಂದಿಗೆ ದೇವಸ್ಥಾನ, ಚರ್ಚ್, ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳಲ್ಲಿ ದೇವರ ದರ್ಶನಕ್ಕೆ/ಪ್ರಾರ್ಥನೆಗೆ ಮಾತ್ರ ಅನುಮತಿಸಲಾಗಿದೆ. ಆದರೆ ಯಾವುದೇ ಸೇವೆ/ಅರ್ಪಣೆ ಅಥವಾ ಇತರ ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ. ಶೈಕ್ಷಣಿಕ ಸಂಸ್ಥೆಗಳು/ ಟುಟ್ಯೋ ರಿಯಲ್ಸ್/ ಕಾಲೇಜುಗಳು ಮುಂದಿನ ಆದೇಶದವರ ಮುಚ್ಚಲ್ಪಟ್ಟಿರುತ್ತವೆ. ಹಾಗೂ ಶೇ. 100 ರಷ್ಟು ಆಸನ ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ ಅನುಮತಿಸಲಾಗಿದೆ.

ಇನ್ನು ರಾತ್ರಿ ವೇಳೆ ಜನರ ಓಡಾಟ ನಿಯಂತ್ರಿಸುವ ಸಲುವಾಗಿ ರಾತ್ರಿ ಕರ್ಫ್ಯೂ ನ್ನು ಜಾರಿಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಜು.5 ರಿಂದ ಜು.19 ರ ವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಅದರಂತೆ ರಾತ್ರಿ ಕರ್ಫ್ಯೂ ನ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳಿಗೆ ಹೊರತುಪಡಿಸಿಜನರ‌ ಓಡಾಟಗಳನ್ನು ಕಡ್ಡಾಯ ವಾಗಿ ನಿಷೇಧಿಸಲಾಗಿದೆ. ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು-ತುರ್ತು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿಸಲಾಗಿದೆ.

ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು/ ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ, ಹಾಗೂ ಅಂತಹ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಥೆಯಿಂದ ನೀಡಲಾದ ಸೂಕ್ತ ಗುರುತಿನ ಚೀಟಿ/ ಅನುಮತಿಗೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸುವ ಮೂಲಕ ಸಂಚಾರಿಸ ಬಹುದಾಗಿದೆ. ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಒದಗಿಸುವ ನೌಕರರು ಹಾಗೂ ವಾಹನಗಳನ್ನು ತಮ್ಮ ಸಂಸ್ಥೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯನ್ನು ಸಲ್ಲಿಸಿ ಸಂಚಾರಿಸಬಹುದಾಗಿದೆ. 

ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನೆ / ಸಂಸ್ಥೆ ( IT and ITeS companies /organization) ಗಳಲ್ಲಿಕಾರ್ಯ ನಿರ್ವಹಿಸುವ ಅಗತ್ಯ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸಲಾಗಿದೆ. ವೈದ್ಯಕೀಯ, ತುರ್ತು ಹಾಗೂ ಔಷಧಾಲಯಗಳನ್ನು ಒಳಗೊಂಡ ಅವಶ್ಯಕ ಸೇವಗಳು ಯಥಾ ರೀತಿಯಲ್ಲಿ ಸರಕಾರದ ನಿಯಮಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ ಹಾಗೂ ಇತರ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿದೆ.

ಎಲ್ಲಾ ತರಹದ ಟ್ರಕ್ ಗಳಲ್ಲಿ ಸಾಗಿಸುವ ಸರಕಗಳು, ಸರಕು, ವಾಹನ, ಅಥವಾ ಇತರ ಸರಕು ಸಾಗಾಟ ವಾಹನಗಳು, ಖಾಲಿ ವಾಹನಗಳನ್ನು ಒಳಗೊಂಡು ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಕಂಪನಿಗಳು ಹಾಗೂ ಹೋಮ್ ಡೆಲಿವರಿ ಕೆಲಸವನ್ನು ಮುಂದುವರೆಸಲು ಅನುಮತಿಸಿದೆ. ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿ ಸಲಾಗಿದೆ ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣ ಗಳಿಂದ, ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು/ ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

Leave a Reply

Your email address will not be published. Required fields are marked *

error: Content is protected !!