ಉಡುಪಿ: 113 ಮಂದಿಯಲ್ಲಿ ಕೋವಿಡ್ ಸೋಂಕು – 878 ಸಕ್ರಿಯ ಪ್ರಕರಣ

ಉಡುಪಿ ಜು.6(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಕಡಿಮೆಯಾಗುತ್ತಾ ಬರುತ್ತಿದೆ. ಜಿಲ್ಲೆಯಲ್ಲಿ ಇಂದು 113 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 60, ಕುಂದಾಪುರ 34, ಕಾರ್ಕಳ 17 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ಸದ್ಯ  ಜಿಲ್ಲೆಯಲ್ಲಿ 878 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಉಡುಪಿಯ 81 ವರ್ಷದ ‌ಓರ್ವ ವ್ಯಕ್ತಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಜು. 5 ರಂದು ಜಿಲ್ಲೆಯಲ್ಲಿ 71 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ  42,327 ಮಂದಿ ಗುಣಮುಖರಾಗಿದ್ದಾರೆ.

ಹಾಗೂ  ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 67,024 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 65,748 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2 ನೇ ಅಲೆಯಲ್ಲಿ ಜು.5 ರ ವೇಳೆಗೆ ಜಿಲ್ಲೆಯಲ್ಲಿ 3,28,874 ಮಂದಿ ಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 43,413 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2 ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 208 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ 7 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 6 ಹಾಗೂ ಹೊರ ಜಿಲ್ಲೆಯ 25 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ  ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 26 ಮಂದಿ  ಸೋಂಕಿನಿಂದ ಗುಣಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 35 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!