ಹೋಟೆಲ್, ಶಾಪಿಂಗ್ ಮಾಲ್ ಸಿಬಂದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಜಿಲ್ಲಾಧಿಕಾರಿ
ಉಡುಪಿ: ದಿನದಿಂದ ದಿನಕ್ಕೆ ಕೋವಿಡ್ -19 ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ , ಜಿಲ್ಲೆಯಲ್ಲಿರುವ ಮಾಲ್ ಗಳು, ಶಾಪಿಂಗ್ ಕಾಂಪ್ಲೆಕ್ಸ್ ಗಳು, ಅಂಗಡಿ ಮುಂಗಟ್ಟುಗಳು, ಆಹಾರ ವಿತರಕ ಸಂಸ್ಥೆಗಳು, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಮಾಲಿಕರು ತಮ್ಮ ಸಂಸ್ಥೆಯ ಸಿಬಂದಿಗಳಿಗೆ ಕಡ್ಡಾಯವಾಗಿ ಕೋವಿಡ್ -19 ಪರೀಕ್ಷೆ ಮಾಡಿಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೋವಿಡ್ 19 ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ದೃಢಪಟ್ಟ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆಯಾಗುತ್ತಿದೆ. ಸಮುದಾಯದಲ್ಲಿ ಸರ್ವೇಕ್ಷಣ ಕಾರ್ಯವನ್ನು ಚುರುಕುಗೊಳಿಸಬೇಕಾಗಿದ್ದು, ಕೋವಿಡ್ 19 ಪರೀಕ್ಷೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಬೇಕಾಗಿರುತ್ತದೆ.
ಈ ನಿಟ್ಟಿನಲ್ಲಿ ಸಮುದಾಯದ ಕೆಲವು ನಿರ್ದಿಷ್ಟ ವರ್ಗಗಳನ್ನು ಆದ್ಯತೆಯ ಮೇರೆಗೆ ಆಯ್ಕೆ ಮಾಡಿಕೊಂಡು ಯಾದೃಚ್ಛಿಕವಾಗಿ (Random) ತಪಾಸಣೆಗೆ ಒಳಪಡಿಸಿ ಸ್ವಾಬ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಬೇಕಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ COVID ರೆಗ್ಯೂಲೇಶನ್ 2020 ಅಧಿಸೂಚನೆಯನ್ವಯ, ಉಡುಪಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ತಮ್ಮ ವ್ಯಾಪ್ತಿಗೆ ಸೇರಿದ ತಾಲೂಕು ಆರೋಗ್ಯಾಧಿಕಾರಿ ಅವರನ್ನು ಸಂಪರ್ಕಿಸಿ ದಿನಾಂಕವನ್ನು ನಿಗದಿಪಡಿಸಿಕೊಂಡು ತಮಗೆ ಹತ್ತಿರವಿರುವ Fever Clinic ನಲ್ಲಿ ತಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಯವರಿಗೆ ತಪಾಸಣೆ ಮಾಡುವುದು.
ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸ್ಥಿರ ದೂರವಾಣಿ ಸಂಖ್ಯೆ:
ತಾಲೂಕು ಆರೋಗ್ಯಾಧಿಕಾರಿ ಕುಂದಾಪುರ – 08254230730
ತಾಲೂಕು ಆರೋಗ್ಯಾಧಿಕಾರಿ ಉಡುಪಿ – : 08202526428
ತಾಲೂಕು ಆರೋಗ್ಯಾಧಿಕಾರಿ ಕಾರ್ಕಳ : 08258231788
ಈ ಆದೇಶವನ್ನು ಉಲ್ಲಂಘಿಸಿ ದಲ್ಲಿ ಅಂತಹ ಸಂಸ್ಥೆಯವರು ಅಪರಾಧಿ ಎಂದು ಪರಿಗಣಿಸಿ ಕಾಯ್ದೆಯನ್ವಯ ಕಠಿಣ ಶಿಕ್ಷೆಗೆ ಗುರಿ ಪಡಿಸಬಹುದಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.