ಕ್ವಾರಂಟೈನ್: ಇನ್ನು ಕುರಿಗಳ ಸರದಿ…!
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕುರಿಗಾಹಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಆತ ಕಾಯುತ್ತಿದ್ದ ಸುಮಾರು 50 ಕುರಿಗಳನ್ನು ಕ್ಯಾರಂಟೈನ್ ಗೆ ಒಳಪಡಿಸಿ ಅವುಗಳ ಗಂಟಲು ದ್ರವ ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಿರುವ ಘಟನೆ ನಡೆದಿದೆ. ಕುರಿಗಾಹಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಕುರಿಗಳನ್ನು ಕ್ವಾರಂಟೈನ್ ಮಾಡಿ ಗಂಟಲು ದ್ರವ ತೆಗೆದು ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿದ್ದರು. ಇದಕ್ಕೆ ಪಶುವೈದ್ಯ ರ ಹಾಗು ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಪ್ರಾಣಿಗಳಿಂದ ಕೋರೋನ ಸೋಂಕು ಹರಡುವುದಿಲ್ಲ ಎಂದು ಪಶು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇಂದು ಕುರಿಗಳ ಗಂಟಲು ದ್ರವ ತೆಗೆದು ಬೆಂಗಳೂರಿನ ಪಶು ವೈದ್ಯಕೀಯ ಕಾಲೇಜಿನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಪ್ರಾಣಿಗಳ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸುವುದು ಇದೇ ಮೊದಲಾಗಿದೆ. ರೈತರು, ಹೈನುಗಾರರು, ಪಶು ಪಾಲಕರು ಆತಂಕಕ್ಕೆ ಒಳಗಾಗಿದ್ದಾರೆ.. |