ಕ್ಷೌರಿಕರು ಮತ್ತು ಅಗಸರಿಂದ ಪರಿಹಾರಕ್ಕೆ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ
ಮಂಗಳೂರು ಜೂನ್ 30: ಕೋವಿಡ್-19 ಹಿನ್ನಲೆಯಲ್ಲಿ 18 ರಿಂದ 65 ವರ್ಷದೊಳಗಿನ ಕ್ಷೌರಿಕ ಮತ್ತು ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರವಾಗಿ ರೂ.5000 ಗಳನ್ನು ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ತಾವು ಕೆಲಸ ನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾಸಿಂಧು ಕೇಂದ್ರದ ಸೇವಾಸಿಂಧು ಪೋರ್ಟಲ್ ನಲ್ಲಿ ನಿಗಧಿತ ಅರ್ಜಿಯಲ್ಲಿ ಮಾಹಿತಿ ಭರ್ತಿ ಮಾಡಿ, ಬ್ಯಾಂಕ್ ಖಾತೆಯೊಂದಿಗೆ ಜೋಡನೆಯಾಗಿರುವ ಆಧಾರ್ ಕಾರ್ಡ್, ವಿಳಾಸ ದೃಢೀಕರಣದ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಣಾ ಪತ್ರ, ಉದ್ಯೋಗ ಪ್ರಮಾಣ ಪತ್ರ ಹಾಗೂ ತಮ್ಮ ಛಾಯಾ ಚಿತ್ರವನ್ನು ಅಪಲೋಡ್ ಮಾಡಬೇಕು.
ಕ್ಷೌರಿಕ, ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಕುರಿತು ಉದ್ಯೋಗ ಪ್ರಮಾಣ ಪತ್ರ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರರು, ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಕಂದಾಯ ಅಧಿಕಾರಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ. ಕಾರ್ಮಿಕ ಇಲಾಖೆಯ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು, ಯಾವುದಾದರೊಂದು ಅಧಿಕಾರಿಯಿಂದ ದೃಢೀಕರಿಸಿ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್ ಮಾಡಬೇಕಾಗಿರುತ್ತದೆ.
ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನ ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರು ಮಾತ್ರ ಪರಿಹಾರ ಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್‍ಬೀಡಿ ಎದುರು, ಬಂಟ್ಸ್‍ಹಾಸ್ಟೇಲ್, ಮಂಗಳೂರು-575003 ಕಚೇರಿ ಪ್ರಕಟಣೆ ತಿಳಿಸಿದೆ.