ರಾಜೀನಾಮೆ ನೀಡುವ ಪ್ರಶ್ನೆ ಇಲ್ಲವೇ ಇಲ್ಲ ಅದು ಕೇವಲ ಗಾಳಿ ಸುದ್ದಿ- ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ- ಬಿಎಸ್ವೈ

ನವದೆಹಲಿ ಜು.17: ರಾಜ್ಯದಲ್ಲಿ ಹಲವು ಸಮಯದಿಂದ  ಹರಿದಾಡುತ್ತಿರುವ  ನಾಯಕತ್ವ ಬದಲಾವಣೆ ವಿಚಾರ ಹಾಗೂ ಸಂಪುಟ ಪುನಾರಚನೆ ವದಂತಿಗಳಿಗೆ ತೆರೆಎಳೆದಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ರಾಜೀನಾಮೆ ನೀಡುವ ಪ್ರಶ್ನೆ ಇಲ್ಲವೇ ಇಲ್ಲ. ಅದು ಕೇವಲ ಗಾಳಿ ಸುದ್ದಿ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಕರ್ನಾಟಕದ ಭವನದಲ್ಲಿ ಮಾತನಾಡಿರುವ ಅವರು,  ನಿನ್ನೆ ಪ್ರಧಾನಿಗಳನ್ನು ಭೇಟಿಯಾಗಿ, ರಾಜ್ಯದ ಅಭಿವೃದ್ಧಿ ಕುರಿತು ಮಾತನಾಡಿದ್ದೇನೆ. ನಾನು ರಾಜೀನಾಮೆಯನ್ನೂ ನೀಡಿಲ್ಲ. ಆ ರೀತಿಯ ಮಾತುಕತೆಗಳೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಿಎಂ, ಮೇಕೆದಾಟು ಯೋಜನೆಗೆ ಅನುಮತಿ, ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ, ಪೆರಿಫೆರಲ್ ರಿಂಗ್ ರೋಡ್‍ಗೆ ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಹೇಳಿದ್ದರು.

Leave a Reply

Your email address will not be published.

error: Content is protected !!