ಕನ್ನಂಬಾಡಿ: ಬೇಬಿ ಬೆಟ್ಟದಲ್ಲಿ ಸ್ಪೋಟಕ ಪತ್ತೆ!

ಮಂಡ್ಯ ಜು.17: ಕನ್ನಂಬಾಡಿ ಕಟ್ಟೆ ಹಾಗೂ ಬೇಬಿ ಬೆಟ್ಟದ ಸರಹದ್ದಿನಲ್ಲಿ ಸ್ಪೋಟಕಗಳು ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕನ್ನಂಬಾಡಿ ಕಟ್ಟೆ ಹಾಗೂ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ನಡುವೆ ಜಿಲೆಟಿನ್ ಕಡ್ಡಿಗಳು ಸೇರಿದಂತೆ ಇತರೆ ಸ್ಪೋಟಕ ವಸ್ತಗಳು ಪತ್ತೆಯಾಗಿವೆ.  

ಈ ಸ್ಪೋಟಕಗಳನ್ನು ಕಲ್ಲು ಗಣಿಗಾರಿಕೆಗೆ ಉಪಯೋಗಿಸಲಾಗುತ್ತದೆ. ಆದರೆ ಅಧಿಕಾರಿಗಳು ಹಾಗೂ ಗಣಿ ಮಾಲೀಕರು ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಸ್ಪೋಟಕಗಳನ್ನು ಬಳಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಕನ್ನಂಬಾಡಿ ಕಟ್ಟೆಯ ಸರಹದ್ದಿ ನಲ್ಲಿ ಇಂತಹ ಸ್ಫೋಟಕ ವಸ್ತಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಇನ್ನು ಸ್ಪೋಟಕಗಳು ಇಲ್ಲಿ ಹೇಗೆ ಬಂತು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ ಅಲ್ಲದೆ  ಜಿಲ್ಲಾಡಳಿತ ಈ ಬಗ್ಗೆ ಕ್ರಮವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಕುರಿತು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!