| ವಿದಿಶಾ ಜು.17: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದ ಬಾವಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.
ವಿದಿಶಾ ಜಿಲ್ಲಾ ಕೇಂದ್ರದಿಂದ 50 ಕಿ.ಮೀ. ದೂರದ ಗಂಜ್ ಬಸೋದಾದಲ್ಲಿ ಮೂರು ದಿನಗಳ ಹಿಂದೆ ಬಾಲಕಿಯೊಬ್ಬಳು ಬಾವಿಗೆ ಬಿದ್ದಿದ್ದಳು. ಈ ವೇಳೆ ಬಾಲಕಿಯನ್ನು ರಕ್ಷಿಸುವ ಸಂದರ್ಭದಲ್ಲಿ ಸುತ್ತ ನೆರೆದಿದ್ದ ಜನರಲ್ಲಿ ಅನೇಕರು ಬಾವಿ ಪಾಲಾಗಿದ್ದರು. ದುರಂತದಲ್ಲಿ ಬಾವಿಗೆ ಬಿದ್ದು ನಾಪತ್ತೆಯಾಗಿದ್ದವರ ರಕ್ಷಣಾ ಕಾರ್ಯ ನಡೆಯುತ್ತಿದ್ದು ಈಗಾಗಲೇ ಅನೇಕ ಮಂದಿಯನ್ನು ರಕ್ಷಿಸಲಾಗಿದೆ. ಮೃತರ ಸಂಖ್ಯೆ 11 ಕ್ಕೆ ತಲುಪಿದೆ.
ಪ್ರಕರಣಕ್ಕೆ ಸಂಬಂಧಿಸಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಿಎಂಓ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿದ್ದು, “ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದ ದುರಂತದ ಬಗ್ಗೆ ತೀರಾ ಆಘಾತವಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳುತ್ತಿದ್ದೇನೆ. ಮೃತರ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್ ವತಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು” ಎಂದು ತಿಳಿಸಲಾಗಿದೆ.
| |