ರಾಜ್ಯದಲ್ಲಿ ಕೊರೋನಾ ಸೋಂಕು ಗಣನೀಯ ಇಳಿಮುಖ: 1,708 ಪ್ರಕರಣ ಪತ್ತೆ- 36 ಮಂದಿ ಸಾವು!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,708 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,83,947ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 36 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,157ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು 386 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,22,189ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 9 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 2,463 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,18,476ಕ್ಕೆ ಏರಿಕೆಯಾಗಿದೆ. ಇನ್ನು 29,291 ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 1,56,564 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,708 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.09ಕ್ಕೆ ಇಳಿದಿದೆ.
ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 55, ಚಿಕ್ಕಮಗಳೂರು 105, ದಕ್ಷಿಣ ಕನ್ನಡ 241, ಹಾಸನ 121, ಮೈಸೂರು 210, ಶಿವ..ಮೊಗ್ಗ 82, ತುಮಕೂರು 64, ಉಡುಪಿ 105 ಪ್ರಕರಣಗಳು ವರದಿಯಾಗಿದೆ.