ಉಡುಪಿ: 104 ಮಂದಿಯಲ್ಲಿ ಕೋವಿಡ್ ಸೋಂಕು ದೃಢ- 846 ಸಕ್ರಿಯ ಪ್ರಕರಣ

ಉಡುಪಿ ಜು.21(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶಗಳು ಹೀಗಿದೆ.

ಜಿಲ್ಲೆಯಲ್ಲಿ ಇಂದು 104 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 57, ಕುಂದಾಪುರ 11, ಕಾರ್ಕಳ 34 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 846  ಕೋವಿಡ್ ಸಕ್ರಿಯ ಪ್ರಕರಣಗಳಿವೆ.  

ಇಂದು ಜಿಲ್ಲೆಯಲ್ಲಿ ಕುಂದಾಪುರದ 53 ವರ್ಷದ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜು. 20 ರಂದು ಜಿಲ್ಲೆಯಲ್ಲಿ  44 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 43,886 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 68,561 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 67,307 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2ನೇ ಅಲೆಯಲ್ಲಿ ಜು.20 ರ ವೇಳೆಗೆ ಜಿಲ್ಲೆಯಲ್ಲಿ 3, 78,484 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು,  ಈ ಪೈಕಿ 44,950 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 218 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ 11 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿ 5, ಕುಂದಾಪುರ 6 ಹಾಗೂ ಹೊರ ಜಿಲ್ಲೆಯ 32 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 30 ಮಂದಿ ಸೋಂಕಿನಿಂದ ಗುಣ  ಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 43 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!