ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಚೇತರಿಕೆಗೆ ಅನಂತೇಶ್ವರದಲ್ಲಿ ವಿಶೇಷ ಪೂಜೆ

ಉಡುಪಿ ಜು.22(ಉಡುಪಿ ಟೈಮ್ಸ್ ವರದಿ): ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರೀಯ ಕಾಂಗ್ರೆಸ್‍ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚೇತರಿಕೆಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿಯ ಅನಂತೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಜಿಲ್ಲಾ ಕಾಂಗ್ರೆಸ್‍ನ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆಸ್ಕರ್ ಫೆರ್ನಾಂಡಿಸ್ ಅವರು ಶೀಘ್ರ ಗುಣಮುಖ ರಾಗುವಂತೆ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣ ಮೂರ್ತಿ ಆಚಾರ್ಯ, ನಗರ ಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್, ಅಮೃತ್ ಶೆಣೈ, ಮಾಜಿ ನಗರ ಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಸತೀಶ್ ಅಮೀನ್ ಪಡುಕೆರೆ, ಭಾಸ್ಕರ್ ರಾವ್ ಕಿದಿಯೂರು, ನರಸಿಂಹ ಮೂರ್ತಿ, ಹರೀಶ್ ಕಿಣಿ, ಅಣ್ಣಯ್ಯ ಶೇರಿಗಾರ್, ಜನಾರ್ಧನ್ ಭಂಡಾರ್ಕರ್, ಸಂಕಪ್ಪ ಎ., ಕೀರ್ತಿ ಶೆಟ್ಟಿ, ಯತೀಶ್ ಕರ್ಕೆರಾ, ಪ್ರಖ್ಯಾತ್ ಶೆಟ್ಟಿ, ಸದಾಶಿವ ಅಮೀನ್ ಕಟ್ಟೆಗುಡ್ಡೆ, ಜ್ಯೋತಿ ಹೆಬ್ಬಾರ್, ಗಣೇಶ್ ರಾಜ್ ಸರಬೆಟ್ಟು ಮೊದಲಾದವರು ಇದ್ದರು.

ಆಸ್ಪತ್ರೆಗೆ ಬರಬೇಡಿ: ಈ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಹೆಚ್ಚಿನ ಸಂಖ್ಯೆಯಲ್ಲಿ  ಆಸ್ಪತ್ರೆಗೆ ಬರಬೇಡಿ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕಾರ್ಯಕರ್ತರು ಹಾಗೂ ಅವರ ಸಾವಿರಾರು ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಅವರ ವೈದ್ಯಕೀಯ ಚಿಕಿತ್ಸೆಗೆ ತೊಂದರೆಗಳು ಉಂಟಾಗುತ್ತಿದೆ. ಅಲ್ಲದೆ ಕೊರೋನಾ ಹಿನ್ನಲೆಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ಸಾವಿರಾರು ಮಂದಿ ಆಗಮಿಸುವುದು ಸರಿಯಲ್ಲ ಎಂದಿದ್ದಾರೆ. ಇದೇ ವೇಳೆ ಅವರ ಅಭಿಮಾನಿಗಳು ತಾವು ಇದ್ದಲ್ಲಿಯೇ ಆಸ್ಕರ್ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!