ಉಡುಪಿ: 82 ಮಂದಿಯಲ್ಲಿ ಸೋಂಕು ದೃಢ- ಜು.23 ರ ಕೋವಿಡ್ ಲಸಿಕೆ ಲಭ್ಯತೆಯ ಮಾಹಿತಿ

ಉಡುಪಿ ಜು.22(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶಗಳು ಹೀಗಿದೆ.

ಜಿಲ್ಲೆಯಲ್ಲಿ ಇಂದು 82 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿ 44, ಕುಂದಾಪುರ 11, ಕಾರ್ಕಳ 26 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 834ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾರೂ ಕೂಡಾ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.

ಜು. 21 ರಂದು ಜಿಲ್ಲೆಯಲ್ಲಿ 94 ಮಂದಿ  ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ  43,980 ಮಂದಿ ಗುಣಮುಖರಾಗಿದ್ದಾರೆ. ಹಾಗೂ  ಜಿಲ್ಲೆಯಲ್ಲಿ  ಒಟ್ಟು  ಈವರೆಗೆ ಪತ್ತೆಯಾದ 68,643 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 67,401 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2ನೇ ಅಲೆಯಲ್ಲಿ ಜು.21 ರ ವೇಳೆಗೆ ಜಿಲ್ಲೆಯಲ್ಲಿ 3,83312 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 45,032 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 218 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ 11  ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 5, ಕುಂದಾಪುರದಲ್ಲಿ 6 ಹಾಗೂ ಹೊರ ಜಿಲ್ಲೆಯ 32ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ  ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ  30 ಮಂದಿ  ಸೋಂಕಿನಿಂದ  ಗುಣ  ಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 43 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

ಜು.23 ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್ 2ನೇಡೋಸ್ ಲಸಿಕೆ ಲಭ್ಯ

ಜು.23 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಅಜ್ಜರಕಾಡು ಉಡುಪಿ (ಜಿಲ್ಲಾ ಆಸ್ಪತ್ರೆಯ ಹಿಂಭಾಗ) 2ನೇ ಡೋಸ್ ಕೋವಿಶೀಲ್ಡ್ ಲಸಿಕೆ- (100 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಬೆಳಿಗ್ಗೆ10 ರಿಂದ ಅಪರಾಹ್ನ1 ರ ವರೆಗೆ) ದಿನಾಂಕ 28/07/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು

Leave a Reply

Your email address will not be published. Required fields are marked *

error: Content is protected !!