ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್’ರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಮಗಳೂರು (ಉಡುಪಿ ಟೈಮ್ಸ್ ವರದಿ): ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ವಿಷಮವಾಗುತ್ತಿದ್ದು, ವೈದ್ಯರ ತಂಡದಿಂದ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆಯಲ್ಲಿದೆ.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ವರದಿ ಸುಳ್ಳು ಎಂಬುದಾಗಿ ಕುಟುಂಬ ಮೂಲಗಳು ತಿಳಿಸಿವೆ.

ಗುರುವಾರ ಸಂಜೆ 5.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ಅವರು ಮಂಗಳೂರಿಗೆ ಆಗಮಿಸಿ ಪಕ್ಷದ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಿದ್ದರಾಮಯ್ಯ ಜತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿರಾದ ಬಿ.ರಮಾನಾಥ ರೈ, ಯು.ಟಿ. ಖಾದರ್, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಮೊಯ್ದೀನ್ ಬಾವಾ, ಐವನ್ ಡಿಸೋಜ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!