ಮುಂಬೈ: ನಿರಂತರ ಸುರಿಯುತ್ತಿರುವ ಮಳೆ- ಭೂ ಕುಸಿತಕ್ಕೆ 36 ಮಂದಿ ಬಲಿ

ಮುಂಬೈ ಜು.23 : ಮಹಾರಾಷ್ಟ್ರ ರಾಜ್ಯದಲ್ಲಿ 40 ವರ್ಷಗಳಲ್ಲಿ ಮೊದಲ ಬಾರಿ ಅತೀ ಹೆಚ್ಚು ಮಳೆಯಾಗಿದೆ. ನಿರಂತರ ಸುರಿಯುತ್ತಿರುವ ಮಳೆಗೆ ರಾಯ್‍ಗಡ ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ್ದು, 36 ಮಂದಿ ಸಾವನ್ನಪ್ಪಿದ್ದಾರೆ.

ನಿನ್ನೆ ಸಂಭವಿಸಿದ ಮೂರು ಭೂಕುಸಿತಗಳಲ್ಲಿ ಈ ಪ್ರಾಣಹಾನಿ ಸಂಭವಿಸಿದ್ದು, ಒಂದು ಸ್ಥಳದಲ್ಲಿ 32 ಮೃತದೇಹಗಳು ಹಾಗೂ ಮತ್ತೊಂದು ಸ್ಥಳದಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ.

ರಾಜ್ಯದ ಕೊಂಕಣ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಸಾವಿರಾರು ಜನರು ಪ್ರವಾಹ ಹಾಗೂ ಭೂಕುಸಿತದಲ್ಲಿ ಸಿಲುಕಿದ್ದಾರೆ. ಅಲ್ಲದೆ ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಹೆಲಿಕಾಪ್ಟರ್‍ಗಳನ್ನು ಬಳಸಲಾಗುತ್ತಿದೆ.

ಇನ್ನು ಪ್ರವಾಹದಲ್ಲಿ ಸಿಲುಕಿರುವವರನ್ನು ಮನೆಯ ಮೇಲ್ಬಾವಣಿ ಅಥವಾ ಎತ್ತರದ ಪ್ರದೇಶಕ್ಕೆ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಹಾಗೂ ಮಹಾರಾಷ್ಟ್ರದ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಇಂದು ಸ್ಥಳೀಯ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!