ನೀಲಿಚಿತ್ರ ನಿರ್ಮಾಣ, ಪ್ರಸಾರ ಪ್ರಕರಣ- ಜು.27 ರವರೆಗೆ ರಾಜ್‍ಕುಂದ್ರ ಪೊಲೀಸ್ ಕಸ್ಟಡಿಗೆ

ಮುಂಬೈ ಜು.23: ನೀಲಿಚಿತ್ರ ನಿರ್ಮಾಣ, ಪ್ರಸಾರ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ರಾಜ್‍ಕುಂದ್ರರ ಪೊಲೀಸ್ ಕಸ್ಟಡಿ ಅವಧಿಯನ್ನು ಜು.27 ರ ವರೆಗೆ ವಿಸ್ತರಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ರಾಜ್‍ಕುಂದ್ರ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಮುಕ್ತಾಯಗೊಂಡ ಹಿನ್ನೆಲೆ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ, ಈಗಾಗಲೆ ಕುಂದ್ರಾರಿಂದ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದುಕೊಂಡಿದ್ದು, ಅದರ ವಿಷಯಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆ ಮತ್ತು ಅವರ ವ್ಯವಹಾರ ಮತ್ತು ವಹಿವಾಟುಗಳನ್ನು ಸಹ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ  ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ರಾಜ್‍ಕುಂದ್ರಾ ಅವರನ್ನು ಮತ್ತೆ 4 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!