ಮಣಿಪಾಲ: ಬ್ಲ್ಯಾಕ್ ಫಂಗಸ್ ಸೋಂಕಿಗೆ ಇಬ್ಬರು ಬಲಿ

ಉಡುಪಿ, ಜು.24: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆಯ 45ವರ್ಷದ ಪುರುಷ ಹಾಗೂ ಹಾವೇರಿ ಜಿಲ್ಲೆಯ 43 ವರ್ಷದ ಮಹಿಳೆ ಮೃತಪಟ್ಟವರಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಈ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದೆ. ಮೊದಲಿನ ಇಬ್ಬರೂ ಉಡುಪಿ ಜಿಲ್ಲೆಯವರಾಗಿದ್ದಾರೆ.

ಜಿಲ್ಲೆಯಲ್ಲೀಗ ಒಟ್ಟು ಎಂಟು ಮಂದಿ ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ. ಇವರಲ್ಲಿ ಆರು ಮಂದಿ ಕೆಎಂಸಿ ಮಣಿಪಾಲ ದಲ್ಲಿ ಹಾಗೂ ಇಬ್ಬರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಬೈಂದೂರು ತಾಲೂಕು ಮಯ್ಯಾಡಿಯ 55 ವರ್ಷ ಪ್ರಾಯದ ಮಹಿಳೆಯೊಬ್ಬರು ಮಾತ್ರ ಉಡುಪಿ ಜಿಲ್ಲೆಯವರಾಗಿದ್ದು, ಉಳಿದ ಆರು ಮಂದಿ ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!