ನಾಳೆಯಿಂದ(ಜು.25) ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಸೇವೆ ಆರಂಭಿಸಲು ಅವಕಾಶ

ಮಂಗಳೂರು, ಜು.24: ಕೋವಿಡ್ 2ನೇ ಅಲೆಯ ಅನ್ ಲಾಕ್ ಬಳಿಕ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಪ್ರವೇಶಕ್ಕೆ ಕೆಲವೊದು ನಿರ್ಬಂಧ ವಿಧಿಸಿ ಅವಕಾಶ ನೀಡಲಾಗಿತ್ತು. ಇದೀಗ ರಾಜ್ಯ ಸರಕಾರ ಆ ನಿರ್ಬಂಧವನ್ನು ತೆರವುಗೊಳಿಸಿದ್ದು, ಜು. 25ರಿಂದ ರಾಜ್ಯದ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಸೇವೆಗಳನ್ನು ಆರಂಭಿಸಲು ಅವಕಾಶ ಕಲ್ಪಿಸಿದೆ.

ಈ ಬಗ್ಗೆ ರಾಜ್ಯ ಸರಕಾರದ ಕಾರ್ಯಾಲಯದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಸದ್ಯ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಜಾತ್ರೆ, ದೇವಸ್ಥಾನಗಳ ಉತ್ಸವ, ಮೆರವಣಿಗೆ, ಸಭೆಗಳಿಗೆ ಅವಕಾಶವಿಲ್ಲ ಎಂದು ರಾಜ್ಯ ಸರಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ದೇವಳಗಳಲ್ಲಿ ಸೇವೆಯನ್ನು ಆರಂಭಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಜು. 25ರಿಂದ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ ಹಾಗೂ ಪ್ರಸಾದ ವಿತರಣೆಗೆ ಅವಕಾಶ ಕಲ್ಪಿಸಲು ಆದೇಶಿಸಿದ್ದಾರೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಟೀಟ್ ಮಾಡಿ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!