ಉಡುಪಿ: ಒಂದಂಕಿಗೆ ಇಳಿದ ಕೋವಿಡ್ ಪಾಸಿಟಿವ್ – 749 ಸಕ್ರಿಯ ಪ್ರಕರಣ

ಉಡುಪಿ ಜು.24(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಹಲವು ದಿನಗಳ ಬಳಿಕ ಮೊದಲ ಬಾರಿಗೆ ಅತೀ ಕಡಿಮೆ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ ಮಾತ್ರ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಕುಂದಾಪುರ ‌ಮತ್ತು ಕಾರ್ಕಳದಲ್ಲಿ ಯಾವುದೇ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಈ ಮೂಲಕ  ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 749ಕ್ಕೆ ಇಳಿಕೆಯಾಗಿದೆ.  

ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಜು.23 ರಂದು ಜಿಲ್ಲೆಯಲ್ಲಿ  101 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 44,198 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 68,777 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 67,619 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2ನೇ ಅಲೆಯಲ್ಲಿ ಜು.23 ರ ವೇಳೆಗೆ ಜಿಲ್ಲೆಯಲ್ಲಿ 3,90,465 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 45,166 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 219 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 8 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 5, ಕುಂದಾಪುರ 6 ಹಾಗೂ ಹೊರ ಜಿಲ್ಲೆಯ 33 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ  ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 32 ಮಂದಿ ಸೋಂಕಿನಿಂದ  ಗುಣಮುಖರಾಗಿದ್ದು, 4 ಮಂದಿ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 44 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!