ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

ಮಂಗಳೂರು ಜು.26(ಉಡುಪಿ ಟೈಮ್ಸ್ ವರದಿ): ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರು ಆಯ್ಕೆಯಾಗಿದ್ದಾರೆ.

ಜಯಕಿರಣ ಪತ್ರಿಕೆ ಸಂಖ್ಯೆಯಲ್ಲಿ ಕಳೆದ 16 ವರ್ಷಗಳಿಂದ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ.

ಇವರು ತಮ್ಮ ವರದಿಗಾರಿಕೆಯ ಶೈಲಿಗೆ 2018 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!