| ಉಡುಪಿ ಜು.26(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೊರೋನಾ 2ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶ ಹೀಗಿದೆ.
ಜಿಲ್ಲೆಯಲ್ಲಿ ಇಂದು 214 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 101, ಕುಂದಾಪುರ 51, ಕಾರ್ಕಳ ದಲ್ಲಿ 60 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 882 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಉಡುಪಿಯ 69 ವರ್ಷದ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜು. 25 ರಂದು ಜಿಲ್ಲೆಯಲ್ಲಿ 82 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 44,378 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 69,091 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 67,799 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೋವಿಡ್ 2ನೇ ಅಲೆಯಲ್ಲಿ ಜು.25 ರ ವೇಳೆಗೆ ಜಿಲ್ಲೆಯಲ್ಲಿ 3,96,435 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 45,480 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2 ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 220ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ 8 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 5, ಕುಂದಾಪುರದಲ್ಲಿ 6 ಹಾಗೂ ಹೊರ ಜಿಲ್ಲೆಯ 33 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 32 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 4 ಮಂದಿ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 44 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
| |
Wrong information
We saw 78 in all the tv channels
Please check