ಉಡುಪಿ: 98 ಮಂದಿಯಲ್ಲಿ ಕೋವಿಡ್ ಸೋಂಕು ದೃಢ- ಸಕ್ರಿಯ ಪ್ರಕರಣ ಮತ್ತೆ ಏರಿಕೆ

ಉಡುಪಿ ಜು.27(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೊರೋನಾ 2ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶ ಹೀಗಿದೆ.

ಜಿಲ್ಲೆಯಲ್ಲಿ ಇಂದು 98 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿ 47, ಕುಂದಾಪುರ 28, ಕಾರ್ಕಳ 23 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 872 ಕೋವಿಡ್ ಸಕ್ರಿಯ ಪ್ರಕರಣಗಳಿವೆ.  

ಇಂದು ಜಿಲ್ಲೆಯಲ್ಲಿ ಕುಂದಾಪುರದ 78 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜು. 26 ರಂದು ಜಿಲ್ಲೆಯಲ್ಲಿ 107 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ  44,485 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 69,189  ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 67,906 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2 ನೇ ಅಲೆಯಲ್ಲಿ ಜು.26 ರ ವೇಳೆಗೆ ಜಿಲ್ಲೆಯಲ್ಲಿ 3,98,950 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 45,578 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 221ಮಂದಿ ಸೋಂಕಿಗೆ ಬಲಿಯಾಗಿ ದ್ದಾರೆ. ಇನ್ನು ಜಿಲ್ಲೆಯಲ್ಲಿ 9 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 5, ಕಾರ್ಕಳದಲ್ಲಿ 6 ಹಾಗೂ ಹೊರ ಜಿಲ್ಲೆಯ 35 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ  ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 32 ಮಂದಿ ಸೋಂಕಿನಿಂದ  ಗುಣಮುಖರಾಗಿದ್ದು, 5 ಮಂದಿ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 46 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!