ಉಡುಪಿ: ಜು. 29 ರಂದು ವಿದೇಶಕ್ಕೆ ತೆರಳುವವರಿಗೆ ಮಾತ್ರ ಲಸಿಕೆ

ಉಡುಪಿ, ಜು.28: ಜಿಲ್ಲೆಯಲ್ಲಿ ಜುಲೈ 29 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ(ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9.30 ರಿಂದ ಅಪರಾಹ್ನ 1 ಗಂಟೆಯವರೆಗೆ, ಆಗಸ್ಟ್ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!