ಉಡುಪಿ: ಮತ್ತೆ ಏರಿಕೆ ಹಾದಿಯಲ್ಲಿ ಕೊರೋನಾ ಸೋಂಕು- ಕಾರ್ಕಳದ ಯುವಕ ಸಹಿತ ಇಬ್ಬರ ಸಾವು

ಉಡುಪಿ, ಜು.28(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೊರೋನಾ 2ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶ ಹೀಗಿದೆ.

ಜಿಲ್ಲೆಯಲ್ಲಿ ಇಂದು 109 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿ 45, ಕುಂದಾಪುರ 20, ಕಾರ್ಕಳ 44 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 893 ಕೋವಿಡ್ ಸಕ್ರಿಯ ಪ್ರಕರಣಗಳಿವೆ.  

ಇಂದು ಜಿಲ್ಲೆಯಲ್ಲಿ ಕಾರ್ಕಳದ 34 ವರ್ಷದ ಓರ್ವ ವ್ಯಕ್ತಿ ಹಾಗೂ ಉಡುಪಿಯ 76 ವರ್ಷದ ಓರ್ವ ವ್ಯಕ್ತಿ ಸೋಂಕಿನಿಂದ ಮೃತ ಪಟ್ಟಿದ್ದಾರೆ.ಜು. 27 ರಂದು ಜಿಲ್ಲೆಯಲ್ಲಿ 86 ಮಂದಿ  ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ  44,571 ಮಂದಿ ಗುಣಮುಖರಾಗಿದ್ದಾರೆ.

ಹಾಗೂ  ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 69,298 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 67,992 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2 ನೇ ಅಲೆಯಲ್ಲಿ ಜು.27 ರ ವೇಳೆಗೆ ಜಿಲ್ಲೆಯಲ್ಲಿ 4,03766 ಮಂದಿ ಯನ್ನು ಕೋವಿಡ್  ಟೆಸ್ಟ್ ಗೆ ಒಳಪಡಿಸಿದ್ದು,  ಈ ಪೈಕಿ 45,687 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2 ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 223ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ 9 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 5, ಕಾರ್ಕಳದಲ್ಲಿ 6 ಹಾಗೂ ಹೊರ ಜಿಲ್ಲೆಯ 35 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 32 ಮಂದಿ  ಸೋಂಕಿನಿಂದ ಗುಣಮುಖ ರಾಗಿದ್ದು, 5 ಮಂದಿ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 46 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!