ಉಡುಪಿ: ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅಖಿಲೇಶ್ ನೇಮಕ

ಉಡುಪಿ (ಉಡುಪಿ ಟೈಮ್ಸ್ ವರದಿ): ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಮಾಜಿ ಎನ್. ಎಸ್. ಯು. ಐ. ಅಧ್ಯಕ್ಷ ಅಖಿಲೇಶ್ ಕೋಟ್ಯಾನ್ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೀನುಗಾರರ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಸುಣಗಾರ ನೇಮಕ ಮಾಡಿದ್ದಾರೆ. 

ಉತ್ಸಾಹಿ ಕಾಂಗ್ರೆಸ್ ಕಾರ್ಯಕರ್ತರಾಗಿರುವ ಅಖಿಲೇಶ್ ಕೋಟ್ಯಾನ್, ಕಾಪು ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಇವರ ಶಿಫಾರಸಿನ ಮೇರೆಗೆ ಅಖಿಲ ಭಾರತ ಮೀನುಗಾರ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿರುವ ಯು. ಆರ್. ಸಭಾಪತಿ ಆದೇಶದ ಮೇರೆಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ನೇಮಕ ಮಾಡಿದ್ದು, ಕೂಡಲೇ ಜವಾಬ್ದಾರಿಯನ್ನು ವಹಿಸಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಶ್ರಮಿಸಬೇಕೆಂದು ರಾಜ್ಯ ಮೀನುಗಾರರ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಮಂಜುನಾಥ ಸುಣಗಾರ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!