ಉಡುಪಿ: ಇಂದು ಮತ್ತೆ ಏರಿಕೆಯಾದ ಕೋವಿಡ್ ಸೋಂಕು- ಸಕ್ರಿಯ ಪ್ರಕರಣ 1000ಕ್ಕೆ ಏರಿಕೆ!

ಉಡುಪಿ ಜು.29(ಉಡುಪಿ ಟೈಮ್ಸ್ ವರದಿ): ಕಳೆದ ಕೆಲ ದಿನಗಳಿಂದ 100 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ 1000 ಕ್ಕೆ ಏರಿದೆ.

ಜಿಲ್ಲೆಯಲ್ಲಿ ಇಂದು 174 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿ 93, ಕುಂದಾಪುರ 42, ಕಾರ್ಕಳ 39 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1000 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಉಡುಪಿಯ 48 ವರ್ಷದ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜು. 28 ರಂದು ಜಿಲ್ಲೆಯಲ್ಲಿ 66 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ  44,637 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 69,472  ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 68,058 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2ನೇ ಅಲೆಯಲ್ಲಿ ಜು.28 ರ ವೇಳೆಗೆ ಜಿಲ್ಲೆಯಲ್ಲಿ 4,07367 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 45,861 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 224 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ 6 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 5, ಕಾರ್ಕಳ 6 ಹಾಗೂ ಹೊರ ಜಿಲ್ಲೆಯ 35 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ  ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 35ಮಂದಿ ಸೋಂಕಿನಿಂದ ಗುಣ  ಮುಖರಾಗಿದ್ದು, 5 ಮಂದಿ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 46 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!