ಅನಗತ್ಯವಾಗಿ ಓಡಾಡಿದರೆ ವಾಹನ ಮುಟ್ಟುಗೋಲು: ಜಿಲ್ಲಾಧಿಕಾರಿ
ಉಡುಪಿ: ಜುಲೈ 5 ರ ಭಾನುವಾರದಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ
ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಪಾಲನೆಯಾಗಲಿದ್ದು, ಈ ಅವಧಿಯಲ್ಲಿ ಅವಶ್ಯಕ ಸೇವೆಗಳಾದ ಹಾಲು, ದಿನ ಪತ್ರಿಕೆ , ಆಸ್ಪತ್ರೆ, ಮತ್ತು ಔಷಧ ಅಂಗಡಿಗಳು ಮಾತ್ರ ತರೆಯಲಿದ್ದು, ಇತರೆ ಯಾವುದೇ ಅಂಗಡಿಗಳು ತರೆಯುವಂತಿಲ್ಲ,
ಅಗತ್ಯ ವಸ್ತುಗಳ ಸರಕು ಸಾಗಾಣಿಕೆಗೆ ಮಾತ್ರ ಅವಕಾಶವಿದ್ದು, ಈಗಾಗಲೇ ಅನುಮತಿ ಪಡೆದಿರುವ ವಿವಾಹಗಳಲ್ಲಿ ನಿಗಧಿತ ಸಂಖ್ಯೆಯ ಜನರು ಮಾತ್ರ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಲಾಕ್‌ಡೌನ್ ಅವಧಿಯಲ್ಲಿ ಅನಗತ್ಯವಾಗಿ ವಾಹನಗಳಲ್ಲಿ ಓಡಾಡಿದರೆ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಹಾಗೂ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಈಗಾಗಲೇ ಸೆಕ್ಷನ್ 144 ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.