ಆರು ರಾಜ್ಯಗಳಲ್ಲಿ ಹೆಚ್ಚಿದ ಕೊರೋನಾ ಸೋಂಕು- ಕೇರಳದಲ್ಲಿ ಪಾಸಿಟಿವಿಟಿ ದರ ಶೇ.10ಕ್ಕೆ ಏರಿಕೆ

ನವದೆಹಲಿ: ದೇಶದ ಆರು ರಾಜ್ಯಗಳಲ್ಲಿ ಮತ್ತೆ  ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಕೇರಳ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಅರುಣಾಚಲ ಹಾಗೂ ಮೀಜೋರಾಂ ರಾಜ್ಯಗಳಲ್ಲಿ ಸೋಂಕು ಪ್ರಕರಣ ಹೆಚ್ಚಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಕೇರಳದಲ್ಲಿ ವಾರದ ಪಾಸಿಟಿವಿಟಿ ದರ ಶೇಕಡ 10 ಕ್ಕಿಂತ ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಕಠಿಣ ನಿರ್ಬಂಧಗಳನ್ನು ವಿಧಿಸಲು ಮುಂದಾಗಿದೆ. ನೆನ್ನೆ ಈ ಸಂಬಂಧ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಕುರಿತು ಚರ್ಚೆ ನಡೆಸಲಾಗಿದೆ. ಈ ನಡುವೆ ಮೂರನೇ ಎಲೆ ಆಗಸ್ಟ್ ನಲ್ಲಿ ಆರಂಭವಾಗಿ ಬರುವ ಅಕ್ಟೋಬರ್ ವೇಳೆಗೆ ಸೋಂಕು ಪರಾಕಾಷ್ಠೆಗೆ ಮುಟ್ಟಲಿದೆ ಎಂದು ಆರೋಗ್ಯ ವಲಯದ ಪರಿಣಿತರು ಅಭಿಪ್ರಾಯಪಟ್ಟಿದ್ದಾರೆ. 

ಕೇರಳದಲ್ಲಿ ಈಗ ನಿತ್ಯ 20 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣ ವರದಿಯಾಗುತ್ತಿದೆ. ಈ ನಡುವೆ ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 42,ಸಾವಿರದ 625 ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ ಇದೇ ವೇಳೆ ಚಿಕಿತ್ಸೆ ಫಲಕಾರಿಯಾಗದೆ 562  ರೋಗಿಗಳು ಮೃತಪಟ್ಟಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ. 

ಮಹಾರಾಷ್ಟ್ರದಲ್ಲಿ 6,126 ಹೊಸ ಪ್ರಕರಣಗಳು, 7436 ಚೇತರಿಕೆ ಹಾಗೂ 195 ಸಾವಿನ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಸದ್ಯ 72,810 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೇ ಪಾಸಿಟಿವಿಟಿ ಪ್ರಕರಣಗಳ ಸಂಖ್ಯೆ 63,27,194 ಆಗಿದೆ. ಮಣಿಪುರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬಹುಶಿಸ್ತೀನ ತಂಡವೊಂದನ್ನು ಕೇಂದ್ರ ಸರ್ಕಾರ ನಿಯೋಜಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ

Leave a Reply

Your email address will not be published. Required fields are marked *

error: Content is protected !!