ನಾಲ್ಕು ದಶಕಗಳ ಬಳಿಕ ಹಾಕಿಯಲ್ಲಿ ಪದಕ ಗೆದ್ದ ಭಾರತ

ಟೋಕಿಯೊ: ಇಂದು ನಡೆದ ಪ್ಲೇ ಆಫ್ ಪಂದ್ಯದಲ್ಲಿ ಜರ್ಮನಿ ತಂಡವನ್ನು ಸೋಲಿಸಿದ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದು ಕೊಂಡಿದೆ.

ಇಂದಿನ ಪಂದ್ಯದಲ್ಲಿ ಭಾರತ ತಂಡ 5-4 ಗೋಲುಗಳ ಅಂತರದಿಂದ ಜಯಿಸಿತು.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಗುರುವಾರ ನಡೆದ ಮೂರನೇ ಸ್ಥಾನಕ್ಕಾಗಿ ಹೋರಾಟದಲ್ಲಿ ಭಾರತ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿ ಕಂಚಿನ ಪದಕ ಜಯಿಸಿತು.  

ಗೋಲುಗಳ ಸುರಿಮಳೆಯೇ ನಡೆದ ಪಂದ್ಯದಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಅರ್ಹ ಗೆಲುವು ದಾಖಲಿಸಲು ನೆರವಾದರು. 

1980ರ ಮಾಸ್ಕೊ ಒಲಿಂಪಿಕ್ಸ್‌ನಲ್ಲಿ ಭಾರತ ಚಿನ್ನದ ಪದಕ ಜಯಿಸಿತ್ತು. ಈಗ 41 ವರ್ಷಗಳ ಬಳಿಕ ಮತ್ತೆ ಪದಕ ಗೆದ್ದ ಸಾಧನೆ ಮಾಡಿದೆ.  

Leave a Reply

Your email address will not be published. Required fields are marked *

error: Content is protected !!