ಮಂಗಳೂರು ಗುಡ್ಡ ಕುಸಿತ: ಬಾಲಕ-ಬಾಲಕಿ ದುರ್ಮರಣ!
ಮಂಗಳೂರು: ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಂಗ್ಲೆಗುಡ್ಡ ಕುಸಿತ ದುರಂತದಲ್ಲಿ ಓರ್ವ ಬಾಲಕ, ಬಾಲಕಿ ದುರ್ಮರಣ ಹೊಂದಿದ್ದಾರೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ 30 ಅಡಿ ಕೆಳಕ್ಕೆ ಗುಡ್ಡ ಕುಸಿದಿತ್ತು. ಈ ವೇಳೆಯಲ್ಲಿ ಅಲ್ಲಿ ನಾಲ್ಕು ಮನೆಗಳು ನೆಲಸಮಗೊಂಡಿದ್ದವು. ಈ ವೇಳೆ ದೊಡ್ಡವರು ಮನೆಯಿಂದ ಹೊರ ಓಡಿ ಬಂದಿದ್ದರು. ಆದರೆ 16 ವರ್ಷದ ಸಫ್ವಾನ್ ಹಾಗೂ 10 ವರ್ಷದ ಸಹಲಾ ಬಾಲಕರಿಬ್ಬರು ಸಿಲುಕಿದ್ದರು.
ಈ ವೇಳೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು. ನಿರಂತರವಾಗಿ 4 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಇಬ್ಬರ ದೇಹ ಪತ್ತೆಯಾಗಿತ್ತು. ಆದರೆ ಅದಾಗಲೇ ಅವರಿಬ್ಬರೂ ಮೃತಪಟ್ಟಿದ್ದಾರೆ.
ಗುರುಪುರ ಬಳಿ ಗುಡ್ಡ ಕುಸಿದ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮತ್ತು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಕ್ಕಳ ರಕ್ಷಣೆಯಲ್ಲಿ ಅಗ್ನಿಶಾಮಕದಳ ಮತ್ತು ಎನ್ ಡಿ ಅರ್ ಎಫ್ ತಂಡ ತೊಡಗಿಕೊಂಡಿದ್ದು, ಸ್ಥಳದಲ್ಲಿ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದಾರೆ.
ರಕ್ಷಿಸಿದವರನ್ನು ಸ್ಥಳೀಯ ಗಂಜಿ ಕೇಂದ್ರಕ್ಕೆ ರವಾನಿಸಲು ಸೂಚನೆ ನೀಡಲಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಸಾಥ್ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಸಂಧರ್ಭ ಮಣ್ಣಿ ನಡಿಯಲ್ಲಿ ಸಿಲುಕಿದ್ದ 2 ಜನರ ಮೃತದೇಹ ಪತ್ತೆಯಾಗಿದೆ.