ಕೇರಳ: ಕೋವಿಡ್-19ಗೆ ಒಂದೇ ದಿನ 93 ಸಾವು- 18,607 ಪ್ರಕರಣ ಪತ್ತೆ

ತಿರುವನಂತಪುರಂ: ಕೇರಳದಲ್ಲಿ ಭಾನುವಾರ ಹೊಸದಾಗಿ  18,607 ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 93 ಸೋಂಕಿತರು ಮೃತಪಟ್ಟಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 17,747ಕ್ಕೆ ಏರಿಕೆಯಾಗಿದೆ ಎಂದು ಕೇರಳ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 20, 108 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು ಗುಣಮುಖವಾದರ ಸಂಖ್ಯೆ 33,57,687 ಆಗಿದೆ. ರಾಜ್ಯದಲ್ಲಿ ಸದ್ಯ 1,76,572 ಸಕ್ರಿಯ ಪ್ರಕರಣಗಳು ಇರುವುದಾಗಿ ತಿಳಿಸಿದೆ.

ಕೇರಳ ಸರ್ಕಾರ ಇತ್ತೀಚಿಗೆ ತನ್ನ ಕೋವಿಡ್-19 ನಿಯಾಮಾವಳಿಗಳನ್ನು ಪರಿಷ್ಕರಿಸಿದ್ದು, ವೀಕೆಂಡ್ ಲಾಕ್ ಡೌನ್ ಸರಳಗೊಳಿಸಿದೆ. ಆಗಸ್ಟ್ 11 ರಿಂದ ವಾರದಲ್ಲಿ ಆರು ದಿನಗಳ ಕಾಲ ಅಂಗಡಿ, ಮುಗ್ಗಟ್ಟುಗಳು ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ. 

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದು, ಸೂಕ್ಷ್ಮ ಕಂಟೈನ್ ಮೆಂಟ್ ವಲಯಗಳಲ್ಲಿ ಕೇವಲ ಅವಶ್ಯಕ ಸರಕುಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. 

Leave a Reply

Your email address will not be published. Required fields are marked *

error: Content is protected !!