ಮಂಗಳೂರು: ಆಸ್ಪತ್ರೆಯಿಂದ ಕೊರೋನಾ ಸೋಂಕಿತ ಪರಾರಿ
ಮಂಗಳೂರು: ನಗರದ ಕೋವಿಡ್ ಆಸ್ಪತ್ರೆಯಿಂದ ಪಾಸಿಟಿವ್ ರೋಗಿಯೊಬ್ಬ ಭಾನುವಾರ ತಪ್ಪಿಸಿಕೊಂಡ ವರದಿಯಾಗಿದೆ.
ಪುತೂರು ದರ್ಬೆ ನಿವಾಸಿ ಕಳೆದ ಕೆಲವು ವರ್ಷಗಳಿಂದ ಮಂಗಳೂರಿನಲ್ಲಿ ವಾಸ್ತವ್ಯ ಮಾಡುತ್ತಿದ್ದ ದೇವರಾಜ್ (18) ತಪ್ಪಿಸಿಕೊಂಡಾತ ಎಂದು ತಿಳಿದು ಬಂದಿದೆ.
ಕೊರೋನಾ ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಜು.1ರಂದು ದೇವರಾಜ್ ಸ್ವತಃ ವೆನ್ಲಾಕ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿದ್ದ, ಭಾನುವಾರ ಪಾಸಿಟಿವ್ ವರದಿ ಬಂದಿತ್ತು.
ಈ ಹಿನ್ನೆಲೆಯಲ್ಲಿ ಆತನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸಂಜೆ ವೇಳೆಗೆ ಆತ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ